ಬೆಂಗಳೂರು: ನಗರದಲ್ಲಿ ಸಿಸಿಬಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನೆಡಸಲಾಗಿದೆ. ಓಡಿಸ್ಸಾ ರಾಜ್ಯ ಮೂಲದ ಡ್ರಗ್ ಪೆಡ್ಲರ್ ಬಂಧಿಸಲಾಗಿದೆ. ಅಲ್ಲದೇ 9 ಲಕ್ಷ ಮೌಲ್ಯದ ನಿಷೇಧಿತ ಮಾದಕ ವಸ್ತು ಗಾಂಜಾ, ಕೃತ್ಯಕ್ಕೆ ಬಳಸುತ್ತಿದ್ದ ಮೊಬೈಲ್ ಪೋನ್ ಹಾಗೂ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಈ ಬಗ್ಗೆ ಬೆಂಗಳೂರು ನಗರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯನ್ನು ನಡೆಸಿ ಓಡಿಸ್ಸಾ ಮೂಲದ ಡ್ರಗ್ ಪೆಡ್ಲರ್ ಒಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ಬಂಧಿತನ ವಶದಿಂದ ಅಂದಾಜು 9 ಲಕ್ಷ ರೂ ಮೌಲ್ಯದ 4 ಕೆ.ಜಿ 475 ಗ್ರಾಂ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್ ಹಾಗೂ ಒಂದು ಎಲೆಕ್ಟ್ರಾನಿಕ್ ತೂಕದ ಯಂತ್ರ ವಶಪಡಿಸಿಕೊಂಡು, ಮಹದೇವಪುರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರೆದಿರುತ್ತದೆ ಎಂದಿದೆ.
ಬಂಧಿತ ವ್ಯಕ್ತಿಯು ಓಡಿಸ್ಸಾ ರಾಜ್ಯದಿಂದ ಕಡಿಮೆ ಬೆಲೆಗೆ ಮಾದಕವಸ್ತುವಾದ ಗಾಂಜಾವನ್ನು ಖರೀದಿ ಮಾಡಿಕೊಂಡು ಬಂದು ಇತನಿಗೆ ಪರಿಚಯವಿರುವ ಗಿರಾಕಿಗಳಿಗೆ ಮತ್ತು ಕಾಲೇಜು ವಿಧ್ಯಾರ್ಥಿಗಳಿಗೆ 20 ಗ್ರಾಂ & 50 ಗ್ರಾಂ ನಂತೆ ಪ್ಯಾಕೇಟ್ ಮಾಡಿ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ ಬಗ್ಗೆ ತಿಳಿದು ಬಂದಿರುತ್ತದೆ. ಈ ಆರೋಪಿತನು ಮೂರು ವರ್ಷದ ಹಿಂದೆ ಬೆಂಗಳೂರಿಗೆ ಬಂದು ಮಹದೇವಪುರ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದುಕೊಂಡು ಸ್ವಿಗ್ಗಿ ಮತ್ತು ಜ್ಯೂಮ್ಯಾಟೋಗಳಲ್ಲಿ ಫುಡ್ ಡಿಲೆವರಿ ಬಾಯ್ ಆಗಿ ಕೆಲಸ ಮಾಡಿಕೊಂಡು ಡ್ರಗ್ಸ್ ಪೆಡ್ಡಿಂಗ್ ದಂಧೆಯಲ್ಲಿ ತೊಡಗಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುತ್ತದೆ ಎಂದು ಹೇಳಿದೆ.
ಈ ಕಾರ್ಯಾಚರಣೆಯನ್ನು ಸಿಸಿಬಿಯ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಯಶಸ್ವಿಯಾಗಿ ಕೈಗೊಂಡಿರುತ್ತಾರೆ ಎಂದು ತಿಳಿಸಿದೆ.
ಸಾರ್ವಜನಿಕರ ಗಮನಕ್ಕೆ: ‘ದೀಪಾವಳಿ ಹಬ್ಬ’ದ ಸಂದರ್ಭದಲ್ಲಿ ‘ಈ ನಿಯಮ’ಗಳ ಪಾಲನೆ ಕಡ್ಡಾಯ | Deepavali Festival 2024
‘ನಿಶಾ ಯೋಗೇಶ್ವರ್’ ಆಪಾದನೆ ಸತ್ಯಕ್ಕೆ ದೂರವಾದುದು: ಡಿಸಿಎಂ ಮಾಧ್ಯಮ ಸಲಹೆಗಾರ ಪಿ.ತ್ಯಾಗರಾಜ್ ಸ್ಪಷ್ಟನೆ