ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಡಿಶಾ ಮೂಲದ ಡ್ರಗ್ಸ್ ಪೆಡ್ಲರ್ ನನ್ನು ಬಂಧಿಸಿದ್ದು, ಲಕ್ಷಾಂತರ ರೂ. ಮೌಲ್ಯದ ಮಾದಕ ವಸ್ತು ವಶಕ್ಕೆ ಪಡೆದುಕೊಂಡಿದ್ದಾರೆ.
ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಒಡಿಶಾ ಮೂಲದ ರೋಷನ್ ಕುಮಾರ್ ದಾಲೈ ಎಂಬಾತನನ್ನು ಬಂಧಿಸಿದ್ದು, ಬಂಧಿತನಿಂದ 9 ಲಕ್ಷ ರೂ.ಮೌಲ್ಯದ ಮಾದಕ ವಸ್ತು ವಶಕ್ಕೆ ಪಡೆದುಕೊಳ್ಳಲಾಗಿದೆ.
ಡ್ರಗ್ಸ್ ಪೆಡ್ಲರ್ ರೋಷನ್ ಕುಮಾರ್ ಮಹದೇವಪುರದಲ್ಲಿ ಕಳೆದ 3 ವರ್ಷಗಳಿಂದ ವಾಸವಾಗಿದ್ದ, ಸ್ವಿಗ್ಗಿ, ಜೊಮಾಟೊದಲ್ಲಿ ಕೆಲಸ ಮಾಡುತ್ತಲೇ ಡ್ರಗ್ಸ್ ದಂಧೆ ಮಾಡುತ್ತಿದ್ದ. ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.