ಬೆಂಗಳೂರು : ಪತ್ನಿ ಹಾಗೂ ಪ್ರಿಯಕರ ಏಕಾಂತದಲ್ಲಿದ್ದ ಖಾಸಗಿ ವಿಡಿಯೋಗಳನ್ನು ಸ್ವತಹ ಪತಿಯೇ ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದ ಆರೋಪದ ಹಿನ್ನೆಲೆಯಲ್ಲಿ ಪತಿಯ ವಿರುದ್ಧವೇ ಇದೀಗ ಎಫ್ಐಆರ್ ದಾಖಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಕುರಿತಂತೆ ಪತ್ನಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪತಿಯ ವಿರುದ್ಧ FIR ದಾಖಳಿಸಿದ್ದಾಳೆ.
ಪ್ರತಿದಿನವೂ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಪತಿಯ ವರ್ತನೆಗೆ ಬೇಸತ್ತ ಪತ್ನಿಯು ತನ್ನ ಮಾಜಿ ಪ್ರಿಯಕರನೊಂದಿಗೆ ಸಲುಗೆಯಿಂದ ಇದ್ದಾಳೆ.ಈ ವೇಳೆ ಪ್ರಿಯಕರನೊಂದಿಗೆ ಖಾಸಗಿ ಫೋಟೋ ಹಾಗೂ ವಿಡಿಯೋಗಳು ಮಹಿಳೆಯ ಮೊಬೈಲ್ ನಲ್ಲಿ ಇದ್ದವು.ಇದನ್ನು ಪತಿ ತನ್ನ ಮೊಬೈಲ್ಗೆ ಕಳುಹಿಸಿಕೊಂಡಿದ್ದಾನೆ.
ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವುದಾಗಿ ಕಿರುಕುಳ ನೀಡುತ್ತಿದ್ದಾನೆ. ಮತ್ತು ಆ ವಿಡಿಯೋಗಳನ್ನು ಆತನ ಹಾಗೂ ನನ್ನ ಸ್ನೇಹಿತರಿಗೆ ಕಳಿಸುತ್ತಿದ್ದಾನೆ. ನನಗೆ ಮತ್ತು ನನ್ನ ಮಾಜಿ ಪ್ರಿಯಕರನಿಗೆ ಜೀವ ಬೆದರಿಕೆಯೊಡ್ಡುತ್ತಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಬ್ಯಾಡರಹಳ್ಳಿ ಠಾಣೆ ಪೊಲೀಸರು, ತನಿಖೆ ಕೈಗೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ.