ಕೋಲಾರ : ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರೆದಿದ್ದು, ಕೋಲಾರದಲ್ಲಿ 10 ಕ್ಕೂ ಹೆಚ್ಚು ಜನರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ.
ಕೋಲಾರದಲ್ಲಿ 10ಕ್ಕೂ ಹೆಚ್ಚು ಜನರ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ್ದು, ಮಕ್ಕಳು, ಮಹಿಳೆಯರು, ಹಿರಿಯರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕಿಂಚಿತ್ತೂ ಗಮನ ಹರಿಸಿದಂತೆ ಕಾಣುತ್ತಿಲ್ಲ. ಕೋಲಾರದ ಜನತೆಯಂತೂ ಬೀದಿನಾಯಿಗಳ ದಾಳಿಗೆ ಕಂಗಾಲಾಗಿದ್ದಾರೆ. ಮನೆಯಿಂದ ಹೊರಬರಲೂ ಆತಂಕಪಡುವ ಸ್ಥಿತಿ ನಿರ್ಮಾಣವಾಗಿದೆ.
ಕೋಲಾರದ ಮಾಲೂರು, ಶ್ರೀನಿವಸಪುರ, ಕೋಲಾರ ನಗರ ಸೇರಿದಂತೆ ವಿವಿಧೆಡೆ ಬೀದಿನಾಯಿಗಳ ಹಾವಳಿ ಹೆಚ್ಚುತ್ತಿದ್ದಿದೆ. 10-20 ಬೀದಿ ನಾಯಿಗಳ ಗುಂಪುಗಳ ಏಕಾಏಕಿ ಜನರ ಮೇಲೆ ದಾಳಿ ನಡೆಸುತ್ತಿದ್ದು, ಜನರಲ್ಲಿ ಆತಂಕ ಶುರುವಾಗಿದೆ.