Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಜೆಪಿ ಸದಸ್ಯತ್ವದಲ್ಲಿ ದೇಶಕ್ಕೆ ‘ಯಲಹಂಕ’ ಪ್ರಥಮ: 2.13 ಲಕ್ಷ ನೂತನ ಸದಸ್ಯರ ನೋಂದಣಿ
KARNATAKA

ಬಿಜೆಪಿ ಸದಸ್ಯತ್ವದಲ್ಲಿ ದೇಶಕ್ಕೆ ‘ಯಲಹಂಕ’ ಪ್ರಥಮ: 2.13 ಲಕ್ಷ ನೂತನ ಸದಸ್ಯರ ನೋಂದಣಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಭಾರತೀಯ ಜನತಾ ಪಕ್ಷ ದೇಶಾದ್ಯಂತ ಕೈಗೊಂಡಿರುವ ಸದಸ್ಯತ್ವ ಅಭಿಯಾನದಲ್ಲಿ ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರ ಇಡೀ ದೇಶಕ್ಕೆ ಪ್ರಥಮ ಸ್ಥಾನದಲ್ಲಿದೆ.

ಕ್ಷೇತ್ರದಲ್ಲಿ 2 ಲಕ್ಷದ 13 ಸಾವಿರಕ್ಕೂ ಅಧಿಕ ನೂತನ ಸದಸ್ಯರು ಬಿಜೆಪಿಗೆ ನೋಂದಣಿ ಮಾಡಿಕೊಳ್ಳುವ ಮೂಲಕ ಈ ಸಾಧನೆ ಮಾಡಿದೆ. ಕಳೆದ ಹಲವಾರು ದಿನಗಳಿಂದ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಅವರ ನೇತೃತ್ವದಲ್ಲಿ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಂಡು 2 ಲಕ್ಷಕ್ಕೂ ಅಧಿಕ ನೂತನ ಸದಸ್ಯರನ್ನು ನೋಂದಣಿ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ವಿಶ್ವನಾಥ್ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡರ ನೇತೃತ್ವದಲ್ಲಿ ಪಕ್ಷದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ವಿಶ್ವನಾಥ್, ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಮಾರ್ಗದರ್ಶನದಲ್ಲಿ ಕೈಗೊಂಡ ಅಭಿಯಾನ ಅಭೂತಪೂರ್ವವಾಗಿ ನಡೆದಿದೆ. 2 ಲಕ್ಷದ 13 ಸಾವಿರಕ್ಕೂ ಅಧಿಕ ಜನರನ್ನು ಪಕ್ಷಕ್ಕೆ ಸೇರಿಸಿಕೊಂಡಿರುವುದು ನನಗೆ ಅತೀವ ಸಂತೋಷ ತಂದಿದೆ. ಅಲ್ಲದೇ, ದೇಶದಲ್ಲಿ ಇಷ್ಟೊಂದು ಸಂಖ್ಯೆಯ ಸದಸ್ಯತ್ವವನ್ನು ಮಾಡಿರುವ ಮೊದಲ ವಿಧಾನಸಭಾ ಕ್ಷೇತ್ರ ಯಲಹಂಕ ಆಗಿರುವುದು ನಮ್ಮ ಸಂತಸವನ್ನು ಇಮ್ಮಡಿ ಮಾಡಿರುವುದರ ಜೊತೆಗೆ ಜವಾಬ್ದಾರಿಯನ್ನೂ ಹೆಚ್ಚಿಸಿದೆ ಎಂದು ತಿಳಿಸಿದರು.

ಅಧಿಕಾರದಲ್ಲಿರಲಿ ಬಿಡಲಿ ನಮ್ಮ ಪಕ್ಷಕ್ಕೆ ಹೊಸದಾಗಿ ಸದಸ್ಯರಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ವಿಶೇಷವಾಗಿ ನಮ್ಮ ಕ್ಷೇತ್ರದಲ್ಲಿ ಯುವಕರು ಮತ್ತು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆಯುವ ಮೂಲಕ ಬಿಜೆಪಿ ಪರವಾದ ಅಲೆ ಇದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು.

ಸದಸ್ಯತ್ವ ಅಭಿಯಾನದ ಆರಂಭದಲ್ಲಿ ಕನಿಷ್ಠ 2 ಲಕ್ಷ ನೂತನ ಸದಸ್ಯರನ್ನು ನೋಂದಾಯಿಸಿಕೊಳ್ಳಬೇಕೆಂಬ ಗುರಿಯನ್ನು ಹಾಕಿಕೊಳ್ಳಲಾಗಿತ್ತು. ಆದರೆ, ಈ ಗುರಿಯನ್ನೂ ಮೀರಿ ನಮ್ಮ ಕ್ಷೇತ್ರದಲ್ಲಿ ನೋಂದಣಿ ಆಗಿದ್ದು, ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಇನ್ನೂ 10 ಸಾವಿರಕ್ಕೂ ಹೆಚ್ಚು ಸದಸ್ಯರನ್ನು ನೋಂದಾಯಿಸುವ ನಿರೀಕ್ಷೆ ಇದೆ ಎಂದು ವಿಶ್ವನಾಥ್ ತಿಳಿಸಿದರು.

BREAKING : ‘ಮುಡಾ’ ಹಗರಣ : ಬಿಲ್ಡರ್ ಮಂಜುನಾಥ್ ವಿರುದ್ಧ ‘ED’ ಗೆ ಮತ್ತೊಂದು ದೂರು ಸಲ್ಲಿಕೆ!

ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ : ಬೆಳಗಾವಿಯಲ್ಲಿ ಗೋಮಾಳ ಜಾಗಕ್ಕಾಗಿ ದಲಿತರ ಗುಡಿಸಲುಗಳಿಗೆ ಬೆಂಕಿ!

Share. Facebook Twitter LinkedIn WhatsApp Email

Related Posts

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

1 Min Read

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

1 Min Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

3 Mins Read
Recent News

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

​ತಾಂತ್ರಿಕ ದೋಷ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅರ್ಧದಾರಿಯಲ್ಲೇ ವಾಪಸ್

State News
KARNATAKA

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಕ್ರಿಕೆಟ್ ಹಾಗೂ ಐಪಿಎಲ್ ಅಭಿಮಾನಿಗಳ ಕ್ರೇಜ್‌ಗೆ ಸಾಗರ ಕ್ಷೇತ್ರದ ಜನಪ್ರಿಯ ಶಾಸಕರಾದ ಗೋಪಾಲಕೃಷ್ಣ ಬೇಳೂರು…

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.