ಬೆಂಗಳೂರು: ಸಚಿವ ಜಮೀರ್ ಅಹ್ಮದ್, ಆಧುನಿಕ ಟಿಪ್ಪು ಸುಲ್ತಾನ್ ಆಗಲು ಹೊರಟಿದ್ದಾರೆ. ಈ ರೀತಿಯಾದರೂ ಭೂಮಿ ಕಸಿದು, ಸಿಎಂ ಆಗುವ ಯೋಜನೆ ರೂಪಿಸಲಾಗಿದೆ. ಒಂದು ಕಡೆ ಸಿಎಂ ಸಿದ್ದರಾಮಯ್ಯ ಮುಡಾ ನಿವೇಶನ ಲೂಟಿ ಮಾಡುತ್ತಾರೆ ಎಂಬುದಾಗಿ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಲ್ಲಿಕಾರ್ಜುನ ಖರ್ಗೆ ಕುಟುಂಬ ಸಿಎ ನಿವೇಶನ ಲೂಟಿ ಮಾಡುತ್ತದೆ. ಈಗ ಜಮೀರ್ ಅಹಮದ್ ಕೂಡ ಈ ಪಟ್ಟಿಗೆ ಸೇರಿ ಭೂಮಿ ಕೊಳ್ಳೆ ಹೊಡೆದು ವಕ್ಫ್ಗೆ ಸೇರಿಸಲು ತಂತ್ರ ಮಾಡಿದ್ದಾರೆ. ವಕ್ಫ್ ಆಸ್ತಿ ಹೆಸರಿನಲ್ಲಿ ಲ್ಯಾಂಡ್ ಜಿಹಾದ್ ಮಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ದೌರ್ಜನ್ಯ ವಿರೋಧಿಸಿ ವಿಜಯಪುರದ ರೈತರು ಈ ವರ್ಷ ದೀಪಾವಳಿ ಆಚರಿಸದಿರಲು ನಿರ್ಧರಿಸಿದ್ದಾರೆ. ಅನ್ನ ನೀಡುವ ರೈತರ ಭೂಮಿಗೆ ಕನ್ನ ಹಾಕಿ, ರೈತರ ಮನೆ ದೀಪ ಕಸಿದುಕೊಂಡ ಕಾಂಗ್ರೆಸ್ ಸರ್ಕಾರಕ್ಕೆ ಅನ್ನದಾತರ ಶಾಪ ತಟ್ಟದೇ ಇರದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಕಾಂಗ್ರೆಸ್ ಸರ್ಕಾರದಿಂದ ಲ್ಯಾಂಡ್ ಜಿಹಾದ್ ಆರಂಭ, ಸಿಎಂ ಸಿದ್ದರಾಮಯ್ಯ ಕೂಡಲೇ ಸ್ಪಷ್ಟನೆ ನೀಡಲಿ: ಆರ್.ಅಶೋಕ ಆಗ್ರಹ
ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ : ಬೆಳಗಾವಿಯಲ್ಲಿ ಗೋಮಾಳ ಜಾಗಕ್ಕಾಗಿ ದಲಿತರ ಗುಡಿಸಲುಗಳಿಗೆ ಬೆಂಕಿ!