ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವಂತ 450 ಪೊಲೀಸ್ ಇಲಾಖೆಯ ಹುದ್ದೆಗಳ ನೇಮಕಾತಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಭರ್ತಿಗೆ ಅನುಮೋದನೆ ನೀಡಲಾಗಿದೆ. ಈ ಮೂಲಕ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿಯನ್ನು ನೀಡಲಾಗಿದೆ.
ಇಂದು ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದಂತ ಸಚಿವ ಮಹದೇವಪ್ಪ ಅವರು 22 ವಿಶೇಷ ಪೊಲೀಸ್ ಠಾಣೆಗಳ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಅಲ್ಲದೇ 450 ಹುದ್ದೆಗಳ ನೇಮಕಕ್ಕೆ ಮಂಜೂರಾತಿ ನೀಡಲಾಗಿದೆ ಎಂದು ತಿಳಿಸಿದರು.
ದೌರ್ಜನ್ಯ ಪ್ರಕರಣಗಳ ತುರ್ತು ವಿಲೇವಾರಿಗಾಗಿ ಠಾಣೆಗಳ ಸ್ಥಾಪನೆ ಮಾಡಲಾಗುತ್ತಿದೆ. ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ ಸ್ಥಾಪನೆ ಮಾಡಲಾಗುವುದು. ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆಗೆ ಒತ್ತು ನೀಡಲಾಗುತ್ತದೆ. ಇದು ದೇಶದಲ್ಲೇ ಮೊದಲ ಯೋಜನೆಯಾಗಿ ಎಂದರು.
ಪರಿಶಿಷ್ಟರ ಮೇಲೆ ದೌರ್ಜನ್ಯವಾದಾಗ ದೂರು ದಾಖಲು ಈ ಕ್ರಮ ವಹಿಸಲಾಗಿದೆ. ಸ್ಥಳೀಯ ಠಾಣೆಗಳಲ್ಲಿ ದೂರು ಸಲ್ಲಿಸಬೇಕು. ಅಲ್ಲಿಂದ ಈ ವಿಶೇಷ ಠಾಣೆಗೆ ವರ್ಗಾವಣೆಯಾಗಲಿದೆ. ಕೂಡಲೇ ಎಫ್ ಐಆರ್ ದಾಖಲಿಸಲು ಅವಕಾಶ ನೀಡಲಾಗುತ್ತಿದೆ ಎಂದು ಹೇಳಿದರು.
Watch Video: ನೀವು ಪಟಾಕಿ ಖರೀದಿಸಲು ಹೋಗ್ತಾ ಇದ್ದೀರಾ.? ಈ ವೀಡಿಯೋ ನೋಡಿ ನೀವು ಬೆಚ್ಚಿ ಬೀಳ್ತೀರಿ
ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ : ಬೆಳಗಾವಿಯಲ್ಲಿ ಗೋಮಾಳ ಜಾಗಕ್ಕಾಗಿ ದಲಿತರ ಗುಡಿಸಲುಗಳಿಗೆ ಬೆಂಕಿ!