ಚಂಡೀಗಢ: ಹರಿಯಾಣದ ರೋಹ್ಟಕ್ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಸೋಮವಾರ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರೊಬ್ಬರು ಸಾಗಿಸುತ್ತಿದ್ದ ಪಟಾಕಿಗಳಲ್ಲಿ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
ಘಟನೆಯಲ್ಲಿ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ರೈಲು ಜಿಂದ್ ನಿಂದ ಸಂಪ್ಲಾ ಮತ್ತು ಬಹದ್ದೂರ್ ಘರ್ ಮೂಲಕ ದೆಹಲಿಗೆ ಹೋಗುತ್ತಿತ್ತು.
ರೈಲಿನ ಒಂದು ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಶೀಘ್ರದಲ್ಲೇ ಅದು ಹೊಗೆಯಿಂದ ಆವೃತವಾಗಿದೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್ಪಿ) ಅಧಿಕಾರಿ ತಿಳಿಸಿದ್ದಾರೆ.
“ಪ್ರಾಥಮಿಕ ಮಾಹಿತಿಯ ಪ್ರಕಾರ, ರೈಲಿನಲ್ಲಿ ವಿದ್ಯುತ್ ಉಪಕರಣದಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ ಎಂದು ಶಂಕಿಸಲಾಗಿದೆ ಮತ್ತು ಇದರ ಪರಿಣಾಮವಾಗಿ, ಪ್ರಯಾಣಿಕರು ಸಾಗಿಸುತ್ತಿದ್ದ ಕೆಲವು ಪಟಾಕಿಗಳು ಸ್ಫೋಟಗೊಂಡಿವೆ” ಎಂದು ಅಧಿಕಾರಿ ಬಹದ್ದೂರ್ಗಢದಿಂದ ದೂರವಾಣಿಯಲ್ಲಿ ತಿಳಿಸಿದ್ದಾರೆ.
ಘಟನೆಯಲ್ಲಿ ಎರಡರಿಂದ ಮೂರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅವರು ಹೇಳಿದರು.
ಸ್ಥಳವನ್ನು ಪರಿಶೀಲಿಸಲು ವಿಧಿವಿಜ್ಞಾನ ತಜ್ಞರನ್ನು ಕರೆಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ