ಹೈದರಾಬಾದ್ : ಹೈದರಾಬಾದ್ ನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಪಟಾಕಿ ಸಂಗ್ರಹಿಸಿಟ್ಟಿದ್ದ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೈದರಾಬಾದ್ ನ ಪಾತಬಸ್ತಿಯ ಯಾಕುತ್ ಪುರದಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿ ಪಟಾಕಿ ಸಂಗ್ರಹಿಸಿ ಇಡಲಾಗಿತ್ತು. ರಾತ್ರಿ ಮಲಗಿದ್ದ ವೇಳೆ ಸಿಲಿಂಡರ್ ಸ್ಪೋರಿಕೆಯಾಗಿ ಸ್ಪೋಟಗೊಂಡ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ದಂಪತಿಯನ್ನು ಮೋಹನ್ ಲಾಲ್ (55) ಹಾಗೂ ಪತ್ನಿ ಉಷಾ ಬಾಯಿ (50) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ 15 ವರ್ಷದ ಬಾಲಕಿ ಶ್ರುತಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡ ಶ್ರುತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.