ಮುಂಬೈ :ಮುಂಬೈನಲ್ಲಿ ಇತ್ತೀಚೆಗಷ್ಟೇ ಎನ್.ಸಿ.ಪಿ (ಅಜಿತ್ ಪವಾರ್ ಬಣ) ನಾಯಕ, ಮಾಜಿ ಸಚಿವ ಬಾಬಾ ಸಿದ್ದೀಕಿ ಅವರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದರು. ಇದರ ಬೆನ್ನಲ್ಲೇ ಮತ್ತೆ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಕರೆ ಬಂದಿದೆ.
ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಸಿದ್ದಿಕಿ ಪುತ್ರ ಜೀಶಾನ್ ಸಿದ್ದೀಕಿ ಅವರಿಗೂ ಶುಕ್ರವಾರ ಸಂಜೆ ಬೆದರಿಕೆ ಕರೆ ಬಂದಿದ್ದು, ಆರೋಪಿ ಗುರ್ಪಾನ್ ಖಾನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಬೆದರಿಕೆ ಕರೆ ಮಾಡಿದ್ದ ಗುರ್ಪಾನ್ ಖಾನ್ ನನ್ನು ಉತ್ತರ ಪ್ರದೇಶದ ನೋಯ್ಡಾದಲ್ಲಿ ಬಂಧಿಸಲಾಗಿದೆ.
ಬಾಬಾ ಸಿದ್ದೀಕಿ ಹತ್ಯೆ ಬೆನ್ನಲ್ಲೇ ಲಾರೆನ್ಸ್ ಬಿಷ್ಣೋಯಿ ಮತ್ತವನ ತಂಡದಿಂದ ಕೊಲೆ ಬೆದರಿಕೆ ಎದುರಿಸುತ್ತಿರುವ ನಟ ಸಲ್ಮಾನ್ ಖಾನ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿತ್ತು.