ಶ್ರೀನಗರ : ಕಣಿವೆ ರಾಜ್ಯದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಚರಣೆ ನಡೆಸಿದ್ದು, ನಾಲ್ವರು ಉಗ್ರರನ್ನು ಎನ್ ಕೌಂಟರ್ ಮಾಡಿದೆ.
ಜಮ್ಮು-ಕಾಶ್ಮೀರದಲ್ಲಿ ಮತ್ತೋರ್ವ ಉಗ್ರನನ್ನು ಭಾರತೀಯ ಸೇನೆಯ ಯೋಧರು ಹೊಡೆದುರುಳಿಸಿದ್ದಾರೆ. ನಿನ್ನೆ ಮೂವರು ಉಗ್ರರನ್ನು ಯೋಧರು ಹೊಡೆದುರುಳಿಸಿದ್ದರು. ಈ ಮೂಲಕ ಎರಡು ದಿನದಲ್ಲಿ ನಾಲ್ವರು ಉಗ್ರರನ್ನು ಎನ್ಕೌಂಟರ್ ಮಾಡಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್ನ ಅರಣ್ಯ ಪ್ರದೇಶದಲ್ಲಿ ಅಡಗಿದ್ದ ಇಬ್ಬರು ಉಗ್ರರನ್ನು ನಿನ್ನೆ ಭದ್ರತಾ ಪಡೆಗಳು ಹೊಡೆದುರುಳಿಸಿದ್ದರು. 24 ಗಂಟೆಗಳ ಕಣ್ಗಾವಲಿನ ನಂತರ ಇಂದು ಬೆಳಿಗ್ಗೆ ತೀವ್ರವಾದ ಗುಂಡಿನ ಚಕಮಕಿಯಲ್ಲಿ ಮತ್ತೋರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ.