ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ನಿರ್ಣಯವನ್ನು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿದ್ದೇವೆ. ಮೀಸಲಾತಿಯ ಹಂಚಿಕೆ, ಸುಪ್ರೀಂ ಕೋರ್ಟ್‌ನ ಆದೇಶ ಪಾಲನೆ ಹಾಗೂ ಇನ್ನಿತರೆ ವಿಷಯಗಳಲ್ಲಿ ಸೂಕ್ತ ನಿರ್ಣಯಗಳನ್ನು ಕೈಗೊಳ್ಳಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಏಕಸದಸ್ಯ ಆಯೋಗ ರಚನೆಗೆ ತೀರ್ಮಾನಿಸಲಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಈ ಆಯೋಗಕ್ಕೆ ವರದಿ ಸಲ್ಲಿಸಲು ಮೂರು ತಿಂಗಳ ಸಮಯ ನಿಗದಿ ಪಡಿಸಲಾಗಿದ್ದು, ವರದಿ ಸಲ್ಲಿಕೆಯಾಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸಬಾರದು ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದಿದ್ದಾರೆ.
ಈ ವಿಚಾರವನ್ನು ನಿನ್ನೆಯ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳಿಗೆ ಸಂಕ್ಷಿಪ್ತವಾಗಿ ವಿವರಿಸಲಾಗಿದೆ. ಆದಾಗ್ಯೂ, ಕೆಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿರುವ ಸುದ್ದಿ ಉದ್ಯೋಗಾಕಾಂಕ್ಷಿಗಳಲ್ಲಿ ಗೊಂದಲಕ್ಕೆ ಕಾರಣವಾಗಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಈಗಾಗಲೇ ಪ್ರಕಟಗೊಂಡಿರುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿ, ಪರೀಕ್ಷೆಗೆ ತಯಾರಿ ನಡೆಸುತ್ತಿರುವವರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಚಾಲ್ತಿಯಲ್ಲಿರುವ ನೇಮಕ ಪ್ರಕ್ರಿಯೆಗಳು ಮುಂದುವರಿಯಲಿದೆ. ಹೊಸ ನೇಮಕಾತಿ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಸೀಮಿತವಾಗಿ ಸಂಪುಟದಲ್ಲಿ ನಿರ್ಣಯ ಕೈಗೊಂಡಿದ್ದು, ಸರ್ಕಾರವು ಎಲ್ಲಾ ನೇಮಕಾತಿಗಳನ್ನು ಸ್ಥಗಿತಗೊಳಿಸಿಲ್ಲ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದ್ದಾರೆ.
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ನಿರ್ಣಯವನ್ನು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿದ್ದೇವೆ. ಮೀಸಲಾತಿಯ ಹಂಚಿಕೆ, ಸುಪ್ರೀಂ ಕೋರ್ಟ್‌ನ ಆದೇಶ ಪಾಲನೆ ಹಾಗೂ ಇನ್ನಿತರೆ ವಿಷಯಗಳಲ್ಲಿ ಸೂಕ್ತ ನಿರ್ಣಯಗಳನ್ನು ಕೈಗೊಳ್ಳಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಏಕಸದಸ್ಯ ಆಯೋಗ…
— CM of Karnataka (@CMofKarnataka) October 29, 2024
BIG NEWS: ನಾಳೆ ‘ನಟ ದರ್ಶನ್’ ಜಾಮೀನು ಭವಿಷ್ಯ ನಿರ್ಧಾರ: ದೀಪಾವಳಿ ಹಬ್ಬಕ್ಕಾದರೂ ‘ದಾಸ’ನಿಗೆ ಸಿಗುತ್ತಾ ರಿಲೀಫ್?
BIG NEWS : ದೇವಸ್ಥಾನಗಳಲ್ಲಿ `VIP’ ದರ್ಶನ ಸಮಾನತೆಯ ಹಕ್ಕಿನ ಉಲ್ಲಂಘನೆ : ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆ!