ಬೆಂಗಳೂರು: ಕಲಾವಿದರು ಮತ್ತು ಕಲೆಗಳಿಗೆ ರಾಜ್ಯ ಸರ್ಕಾರ ವಿಶೇಷ ಪ್ರೋತ್ಸಾಹ ನೀಡುತ್ತಿದ್ದು, ಮುಂದಿನ ವರ್ಷದಿಂದ ಕಲಾವಿದರ ಮಾಸಾಶನ ಮೊತ್ತವನ್ನು 3 ಸಾವಿರ ರೂ.ಗೆ ಹೆಚ್ಚಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್. ತಂಗಡಗಿ ತಿಳಿಸಿದ್ದಾರೆ.
ಕಲಾವಿದರು ಮತ್ತು ಕಲೆಗಳಿಗೆ ರಾಜ್ಯ ಸರ್ಕಾರ ವಿಶೇಷ ಪ್ರೋತ್ಸಾಹ ನೀಡುತ್ತಿದ್ದು, ಮುಂದಿನ ವರ್ಷದಿಂದ ಕಲಾವಿದರ ಮಾಸಾಶನ ಮೊತ್ತವನ್ನು 3 ಸಾವಿರ ರೂ.ಗೆ ಹೆಚ್ಚಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್. ತಂಗಡಗಿ ತಿಳಿಸಿದ್ದಾರೆ.@CMofKarnataka @siddaramaiah @sstangadagi pic.twitter.com/oIy9KSHMTI
— DIPR Karnataka (@KarnatakaVarthe) October 29, 2024
ಇನ್ನೂ ಕಲಾವಿದರು ಮತ್ತು ಕಲೆಗಳಿಗೆ ಸರ್ಕಾರ ವಿಶೇಷ ಪ್ರೋತ್ಸಾಹ ನೀಡುತ್ತಿದ್ದು, ಮುಂದಿನ ವರ್ಷದಿಂದ ಕಲಾವಿದರಿಗೆ ನೀಡಲಾಗುವ ಮಾಶಾಸನದ ಮೊತ್ತವನ್ನ 3,000ಕ್ಕೆ ಹೆಚ್ಚಿಸಲಾಗುತ್ತದೆ. ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ಅನುದಾನ ನೀಡಲು ಯಾವುದೇ ಹಣಕಾಸಿನ ಕೊರತೆ ಇಲ್ಲ. ಪ್ರತಿಯೊಂದು ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೂ ಚಟುವಟಿಕೆಗಳನ್ನು ನಡೆಸುವ ಸಲುವಾಗಿ ಒಂದು ಕೋಟಿಯವರೆಗೂ ಅನುದಾನವನ್ನು ಒದಗಿಸಲಾಗುತ್ತಿದೆ. ಕಾರ್ಯಕ್ರಮದ ಕುರಿತು ಪ್ರಸ್ತಾವನೆ ಸಲ್ಲಿಸಿದರೆ, ಅದಕ್ಕೆ ಬೇಕಾದ ಅಗತ್ಯದ ಅನುದಾನ ನೀಡಲಾಗುತ್ತಿದೆ. ಈ ಮೂಲಕ ಕಲೆ ಮತ್ತು ಕಲಾವಿದರನ್ನು ಪ್ರೋತ್ಸಾಹಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.
ಕಳೆದ ಸರ್ಕಾರದಲ್ಲಿ ಅಕಾಡೆಮಿ – ಪ್ರಾಧಿಕಾರ ನಿಷ್ಕ್ರಿಯ
ಇಂದಿನ ಸರ್ಕಾರದಲ್ಲಿ ಅಕಾಡೆಮಿಗಳು ಸಂಪೂರ್ಣ ನಿಷ್ಕ್ರಿಯವಾಗಿದ್ದವು. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ 14 ಅಕಾಡೆಮಿ ಮತ್ತು 4 ಪ್ರಾಧಿಕಾರಗಳಿಗೆ ಅಧ್ಯಕ್ಷರನ್ನ ನೇಮಿಸುವ ಮೂಲಕ ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೆಚ್ಚಿನ ವೇಗ ನೀಡಲಾಗಿದೆ ಎಂದರು.
BIG NEWS: ನಾಳೆ ‘ನಟ ದರ್ಶನ್’ ಜಾಮೀನು ಭವಿಷ್ಯ ನಿರ್ಧಾರ: ದೀಪಾವಳಿ ಹಬ್ಬಕ್ಕಾದರೂ ‘ದಾಸ’ನಿಗೆ ಸಿಗುತ್ತಾ ರಿಲೀಫ್?
BIG NEWS : ದೇವಸ್ಥಾನಗಳಲ್ಲಿ `VIP’ ದರ್ಶನ ಸಮಾನತೆಯ ಹಕ್ಕಿನ ಉಲ್ಲಂಘನೆ : ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆ!