ಬೆಂಗಳೂರು: ಛತ್ ಪೂಜೆಯ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸಲು, ನೈಋತ್ಯ ರೈಲ್ವೆಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ – ಬಿಹಾರ ರಾಜ್ಯದ ಬರೌನಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ:
ರೈಲು ಸಂಖ್ಯೆ 06237/06238 ಎಸ್ಎಂವಿಟಿ ಬೆಂಗಳೂರು-ಬರೌನಿ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ (ಒಂದು ಟ್ರಿಪ್)
ನವೆಂಬರ್ 4 ರಂದು ರೈಲು ಸಂಖ್ಯೆ 06237 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರಿನಿಂದ ರಾತ್ರಿ 9:15 ಕ್ಕೆ ಹೊರಟು ಬರೌನಿ ನಿಲ್ದಾಣಕ್ಕೆ ನವೆಂಬರ್ 6 ರಂದು ರಾತ್ರಿ 8 ಗಂಟೆಗೆ ತಲುಪಲಿದೆ.
ಹಿಂದಿರುಗುವ ದಿಕ್ಕಿನಲ್ಲಿ, ನವೆಂಬರ್ 9 ರಂದು ರೈಲು ಸಂಖ್ಯೆ 06238 ಬರೌನಿಯಿಂದ ಬೆಳಿಗ್ಗೆ 10 ಗಂಟೆಗೆ ಹೊರಟು, ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಕ್ಕೆ ನವೆಂಬರ್ 11 ರಂದು ಮಧ್ಯಾಹ್ನ 1:30 ಗಂಟೆಗೆ ತಲುಪಲಿದೆ.
ಈ ರೈಲು ಎರಡೂ ದಿಕ್ಕುಗಳಲ್ಲಿ ಯಲಹಂಕ, ಧರ್ಮಾವರಂ, ಅನಂತಪುರ, ಡೋನ್, ಕರ್ನೂಲ್ ಸಿಟಿ, ಮಹಬೂಬ್ನಗರ, ಕಾಚೇಗೌಡ, ಕಾಜಿಪೇಟ್, ರಾಮಗುಂಡಂ, ಬಲ್ಹರ್ಷಾ, ಸೇವಾಗ್ರಾಮ, ನಾಗ್ಪುರ, ಇಟಾರ್ಸಿ, ಪಿಪಾರಿಯಾ, ಜಬಲ್ಪುರ, ಕಟ್ನಿ, ಸತ್ನಾ, ಪ್ರಯಾಗ್ರಾಜ್ ಛೋಕಿ, ಪಂಡಿತ ದೀನ್ ದಯಾಳ್ ಉಪಾಧ್ಯಾಯ ಜಂ, ಬಕ್ಸಾರ್, ಅರಾ, ದಾನಾಪುರ, ಪಾಟ್ಲಿಪುತ್ರ, ಹಾಜಿಪುರ ಮತ್ತು ಬಚ್ವಾರಾ ನಿಲ್ದಾಣಗಳಲ್ಲಿ ನಿಲ್ಲಲಿದೆ.
ಈ ರೈಲು 20 ಬೋಗಿಗಳನ್ನು ಒಳಗೊಂಡಿರುತ್ತದೆ, ಅವುಗಳೆಂದರೆ: 02 ಎಸಿ-2 ಟೈರ್, 04 ಎಸಿ-3 ಟೈರ್, 10 ಸ್ಲೀಪರ್ ಕ್ಲಾಸ್, 02 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 02 ಎಸ್ಎಲ್ಆರ್ / ಡಿ.
ಬೆಂಗಳೂರಿನ HMT ಅರಣ್ಯ ಭೂಮಿಯಲ್ಲಿ ಮರ ಕಡಿದವರ ವಿರುದ್ಧ ಕಾನೂನು ಕ್ರಮಕ್ಕೆ ‘ಸಚಿವ ಈಶ್ವರ್ ಖಂಡ್ರೆ’ ಸೂಚನೆ
GOOD NEWS: ರಾಜ್ಯದ ಕಲಾವಿದರ ‘ಮಾಸಾಶನ ಮೊತ್ತ 3,000’ಕ್ಕೆ ಹೆಚ್ಚಳ: ಸಚಿವ ಶಿವರಾಜ ತಂಡರಗಿ ಘೋಷಣೆ
BIG NEWS : ದೇವಸ್ಥಾನಗಳಲ್ಲಿ `VIP’ ದರ್ಶನ ಸಮಾನತೆಯ ಹಕ್ಕಿನ ಉಲ್ಲಂಘನೆ : ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆ!