ಶಿವಮೊಗ್ಗ ; 2024-25 ನೇ ಸಾಲಿನಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಜಿಲ್ಲೆಯ ಆಸಕ್ತ ರೈತರಿಂದ ತಾಲೂಕು ಮತ್ತು ಜಿಲ್ಲಾ ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆತ್ಮ ಯೋಜನೆಯಡಿ ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ವೈಜ್ಞಾನಿಕ ಯಂತ್ರೋಪಕರಣ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ಹಸಿರುಮನೆ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಸಾಕಾಣಿಕೆ ಚಟುವಟಿಕೆಯಲ್ಲಿ ಸಾಧನೆ ಮಾಡಿದವರು ಪ್ರಶಸ್ತಿಗೆ ಅರ್ಹರಾಗಿರುತ್ತಾರೆ.
ನಿಗದಿತ ನಮೂನೆ ಅರ್ಜಿಯನ್ನು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ನ.15ರೊಳಗಾಗಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲೆ ಎಲ್ಲಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸುವುದು.
ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರು-ಬರೌನಿ ನಡುವೆ ವಿಶೇಷ ರೈಲು ಸಂಚಾರ
ಬೆಂಗಳೂರಿನ HMT ಅರಣ್ಯ ಭೂಮಿಯಲ್ಲಿ ಮರ ಕಡಿದವರ ವಿರುದ್ಧ ಕಾನೂನು ಕ್ರಮಕ್ಕೆ ‘ಸಚಿವ ಈಶ್ವರ್ ಖಂಡ್ರೆ’ ಸೂಚನೆ