ಬೆಂಗಳೂರು : ನಗರದ ಪೀಣ್ಯ ಬಳಿಯ ಹೆಚ್ ಎಂ ಟಿಯ ಅರಣ್ಯ ಭೂಮಿಯಲ್ಲಿ ಸ್ಯಾಂಡಲ್ ವುಡ್ ನ TAXIC ಚಿತ್ರದ ಚಿತ್ರೀಕರಣಕ್ಕಾಗಿ ಮರಗಳ ಮಾರಣಹೋಮ ಮಾಡಲಾಗಿದೆ. ಹೀಗೆ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮರ ಕಡಿದವರ ವಿರುದ್ಧ ಅರಣ್ಯ ಇಲಾಖೆಯ ವತಿಯಿಂದ ನೋಟಿಸ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ
ಹೌದು ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಆದರೆ ಈ ಚಿತ್ರದ ಶೂಟಿಂಗ್ ಸಲುವಾಗಿ ನೂರಾರು ಮರಗಳನ್ನು ಕಡಿಯಲಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡದ ವಿರುದ್ಧ ಕ್ರಮ ಕೈಕೊಳ್ಳಲು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರು ಸೂಚನೆ ನೀಡಿದ್ದಾರೆ. ಇದರಿಂದ ‘ಟಾಕ್ಸಿಕ್’ ಚಿತ್ರೀಕರಣಕ್ಕೆ ಹಿನ್ನಡೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಮರ ನಾಶ ಮಾಡಿರುವ ಪ್ರದೇಶವನ್ನು ವೀಕ್ಷಿಸಿದ ಸಚಿವ ಈಶ್ವರ್ ಖಂಡ್ರೆ ಅವರು, X ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು, ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ.
ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ.ನಮ್ಮ ಅರಣ್ಯ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ. ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡುಬಂದಲ್ಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು, ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಅಕ್ರಮ ಕೃತ್ಯಕ್ಕೆ… pic.twitter.com/yrjHhG9kLA
— Eshwar Khandre (@eshwar_khandre) October 29, 2024