ಬೆಂಗಳೂರು: ಪ್ರತಿಯೊಂದು ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೂ ಚಟುವಟಿಕೆ ಸಲುವಾಗಿ ₹1 ಕೋಟಿವರೆಗೂ ಅನುದಾನ ಒದಗಿಸಲಾಗುತ್ತಿದೆ. ಕಾರ್ಯಕ್ರಮದ ಕುರಿತು ಪ್ರಸ್ತಾವ ಸಲ್ಲಿಸಿದರೆ, ಅದಕ್ಕೆ ಅಗತ್ಯ ಅನುದಾನ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್. ತಂಗಡಗಿ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ವ್ಯಾಪಾರ, ವ್ಯವಹಾರ ಮಾಡುತ್ತಿದ್ದೀರಿ ಎಂದರೆ ಶೇ.60 ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಸ್ಪಷ್ಟವಾಗಿ ತಿಳಿಸಿರುವ ನ್ಯಾಯಾಲಯದ ಅಭಿಪ್ರಾಯ ಐತಿಹಾಸಿಕವಾದದ್ದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಅವರು ಬಣ್ಣಿಸಿದರು.
ಶೇ. 60ರಷ್ಟು ಕನ್ನಡ ಬಳಕೆ ಮಾಡಬೇಕೆಂಬ ಪ್ರಶ್ನಿಸಿ ಕೆಲ ವಾಣಿಜ್ಯ ಸಂಸ್ಥೆಗಳು ಕೋರ್ಟ್ ಮೆಟ್ಟಿಲೇರಿದ್ದವು. ಆದರೆ ನ್ಯಾಯಾಲಯ ನೀವು ಕರ್ನಾಟಕದಲ್ಲಿದ್ದ ಮೇಲೆ ಸೂಚನಾ ಫಲಕಗಳನ್ನು ಕನ್ನಡದಲ್ಲಿ ಪ್ರದರ್ಶಿಸಬೇಕು ಎಂದು ಹೇಳಿರುವುದು ನಿಜಕ್ಕೂ ಶ್ಲಾಘನೀಯ. ಕನ್ನಡ ಭಾಷೆ ನೆಲ ಜಲ, ಸಂಸ್ಕೃತಿ, ಆಚಾರ – ವಿಚಾರ, ಸಂರಕ್ಷಣೆಯ ವಿಚಾರದಲ್ಲಿ ಸರ್ಕಾರ ವಿಶೇಷ ಕಾಳಜಿ ಹೊಂದಿದೆ ಎಂದು ತಿಳಿಸಿದರು.
ಪ್ರತಿಯೊಂದು ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೂ ಚಟುವಟಿಕೆ ಸಲುವಾಗಿ ₹1 ಕೋಟಿವರೆಗೂ ಅನುದಾನ ಒದಗಿಸಲಾಗುತ್ತಿದೆ. ಕಾರ್ಯಕ್ರಮದ ಕುರಿತು ಪ್ರಸ್ತಾವ ಸಲ್ಲಿಸಿದರೆ, ಅದಕ್ಕೆ ಅಗತ್ಯ ಅನುದಾನ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್. ತಂಗಡಗಿ ತಿಳಿಸಿದ್ದಾರೆ.@CMofKarnataka @siddaramaiah @sstangadagi pic.twitter.com/uPpZXkyThb
— DIPR Karnataka (@KarnatakaVarthe) October 29, 2024
ಕನ್ನಡ ರಾಜ್ಯೋತ್ಸವದಂದು 50 ಸಾಧಕರಿಗೆ ಸುವರ್ಣ ಸಂಭ್ರಮ ಪ್ರಶಸ್ತಿ: ಸಚಿವ ಶಿವರಾಜ್ ತಂಡರಗಿ ಘೋಷಣೆ