ಬೆಂಗಳೂರು: ಸುಪ್ರೀಂ ಕೋರ್ಟ್ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದಂತೆ ರಾತ್ರಿ 8 ರಿಂದ 10 ಗಂಟೆಯವರೆಗೆ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು ಅವಕಾಶ ನೀಡಲಾಗಿದೆ. ಉಳಿದ ಸಮಯದಲ್ಲಿ ಪಟಾಕಿ ಸಿಡಿಸುವುದು ಸಂಪೂರ್ಣ ನಿಷೇಧಿಸಲಾಗಿದೆ.
ಸುಪ್ರೀಂ ಕೋರ್ಟ್ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದಂತೆ ರಾತ್ರಿ 8 ರಿಂದ 10 ಗಂಟೆಯವರೆಗೆ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು ಅವಕಾಶ ನೀಡಲಾಗಿದೆ. ಉಳಿದ ಸಮಯದಲ್ಲಿ ಪಟಾಕಿ ಸಿಡಿಸುವುದು ಸಂಪೂರ್ಣ… pic.twitter.com/LkFDD5ce43
— DIPR Karnataka (@KarnatakaVarthe) October 29, 2024
ಇದಲ್ಲದೆ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಮೇಲ್ಕಾಣಿಸಿದ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು, ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ ನಿಷೇಧಿಸಿರುತ್ತದೆ. ಅಲ್ಲದೇ, ‘ಹಸಿರು ಪಟಾಕಿ’ ಕುರಿತು ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿಯ ವೆಬ್ಸೈಟ್ನಲ್ಲಿ ಮಾಹಿತಿ ಲಭ್ಯವಿರುತ್ತದೆ.
ಮುಂದುವರೆದು, 2024 ನೇ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ ಸಾರ್ವಜನಿಕರು ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡುವಂತೆ ಹಾಗೂ ಹಸಿರು ಪಟಾಕಿಗಳನ್ನಲ್ಲದೆ, ಬೇರೆ ನಿಷೇಧಿತ ಪಟಾಕಿಗಳ ಮಾರಾಟ, ದಾಸ್ತಾನು ಮಾಡುವವರ ವಿರುದ್ಧ ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಂಡು ಸಂಬಂಧಿತ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಲು ಕ್ರಮ ವಹಿಸಬೇಕೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಎಲ್ಲಾ ವಕಯ ಆಯುಕ್ತರಿಗೆ ಕಛೇರಿ ಆದೇಶದ ಮೂಲಕ ಸೂಚಿಸಿರುತ್ತಾರೆ.
ಕನ್ನಡ ರಾಜ್ಯೋತ್ಸವದಂದು 50 ಸಾಧಕರಿಗೆ ಸುವರ್ಣ ಸಂಭ್ರಮ ಪ್ರಶಸ್ತಿ: ಸಚಿವ ಶಿವರಾಜ್ ತಂಡರಗಿ ಘೋಷಣೆ
BIG NEWS: ಬೆಂಗಳೂರಲ್ಲಿ ಅ.31ರಿಂದ ನ.2ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ: ತುಷಾರ್ ಗಿರಿನಾಥ್