ಬೆಂಗಳೂರು : ಯಶ್ ನಟನೆಯ ಟಾಕ್ಸಿಕ್ ಚಿತ್ರದ ಸೆಟ್ ನಿರ್ಮಾಣ ಮಾಡಲು ಮರಗಳಿಗೆ ಕೊಡಲಿ ಏಟು ಹಾಕಲಾಗಿದೆ. ಈ ಬಗ್ಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೆಚ್ಎಂಟಿ ತನ್ನ ವಶದಲ್ಲಿದ್ದ ಜಮೀನನ್ನು ಮಾರಾಟ ಮಾಡಿದೆ. ಮರ, ಗಿಡ ಎಲ್ಲಾ ಕಡಿದು ಸಿನಿಮಾ ಚಿತ್ರೀಕರಣಕ್ಕೆ ಬಾಡಿಗೆ ಕೊಟ್ಟಿದ್ದಾರೆ, ದುಡ್ಡು ಮಾಡ್ತಿದ್ದಾರೆ. ಎಲ್ಲಾ ರೀತಿಯ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಅವರಿಗೆ ಯಾವುದೇ ಅಧಿಕಾರ ಇಲ್ಲ’ ಎಂದು ಈಶ್ವರ ಖಂಡ್ರೆ ಅವರು ಹೇಳಿದ್ದಾರೆ.
ಇಂದು ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಅರಣ್ಯ ಸಂರಕ್ಷಣೆ ಮಾಡುವುದು ನನ್ನ ಕರ್ತವ್ಯ. ಪ್ರಾಥಮಿಕ ಹಂತದಲ್ಲಿ ಅರಣ್ಯ ಇಲಾಖೆ ಮಾಹಿತಿ ಕೊಟ್ಟಿದೆ. ಒಳಗೊಳಗೆ ಏನಿದೆ ಅಂತ ತನಿಖೆ ಆಗಬೇಕು. ಅರಣ್ಯ ಇಲಾಖೆಯ ಜಾಗದಲ್ಲಿ ಸಣ್ಣ ವಿಲೇಜ್ ರೀತಿ ಸೆಟ್ ಹಾಕಿದ್ದಾರೆ. ಏನು ದೃಢೀಕರಣ ಬೇಕು? ಅಂಗೈ ಹುಣ್ಣಿಗೆ ಕನ್ನಡಿ ಅವಶ್ಯಕತೆ ಇಲ್ಲ ಎಂದರು.
ಎಚ್ಎಂಟಿ ಸುಪ್ರೀಂ ಕೋರ್ಟ್ ಗೆ ಹೋಗಿದೆ ಅಲ್ಲಿ ವಿಚಾರಣೆಗೆ ಬರಬೇಕಿದೆ.ಅರಣ್ಯ ಪರವಾನಗಿ ತೆಗೆದುಕೊಂಡಿಲ್ಲ ಪಾಲಿಕೆಗೆ ದೂರು ಕೊಟ್ಟಿದ್ದೇವೆ. ಬಿಬಿಎಂಪಿ ಅವರು ಕಮಿಟಿ ರಚನೆ ಮಾಡಿ ನೋಟಿಸ್ ಕೊಟ್ಟಿದ್ದಾರೆ ಚಿತ್ರತಂಡದ ಮೇಲೆ ನಾವು ಹೇಳುತ್ತಿಲ್ಲ.ಯಾರ ತಪ್ಪು ಇದೆ ಅದನ್ನ ನೋಡಬೇಕು ಎಂದು ಬೆಂಗಳೂರಿನಲ್ಲಿ ಅರಣ್ಯ ಇಲಾಖೆಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.
ಟಾಕ್ಸಿಕ್ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ನಾನು ಖುದ್ದು ಹೋಗಿ ನೋಡಿದ್ದೇನೆ. ಅಲ್ಲಿನ ಸಂಪೂರ್ಣ ಚಿತ್ರಣ ಬದಲಾಗಿದೆ. ಏರಿಯಲ್ ಸರ್ವೇಯಲ್ಲಿ ಕಾಣಿಸಿದೆ. ಇದು ಬಿಬಿಎಂಪಿ ವ್ಯಾಪ್ತಿಗೆ ಬರಲಿದೆ. ಕಾನೂನು ಕ್ರಮಕ್ಕೆ ಪಾಲಿಕೆಗೂ ಪತ್ರ ಬರೆದಿದ್ದೇನೆ. ಸಿನಿಮಾ ತಂಡ ಅನುಮತಿ ಪಡೆದಿದ್ಯಾ ಅಂತಾ ತನಿಖೆ ಮಾಡಿ ನೋಡುತ್ತೇವೆ. ಮರಗಳ ಕಡಿತಲೆ ಮಾಡಲು ಅನುಮತಿ ಪಡೆದಿಲ್ಲ ಅಂತಾ ಅನ್ನಿಸುತ್ತದೆ. ಅನುಮತಿ ಕೊಡಲು ಬರಲ್ಲ. ಅದು ಕಾನೂನು ಬಾಹಿರ’ ಎಂದು ಈಶ್ವರ ಖಂಡ್ರೆ ಅವರು ಹೇಳಿದ್ದಾರೆ.