ಬೆಂಗಳೂರು : ಈ ಬಾರಿಯ 2024-25ನೇ ಸಾಲಿನಲ್ಲಿ 13,000 ಕೋಟಿ ವಾರ್ಷಿಕ ರಾಜಸ್ವ ಸಂಗ್ರಹ ಗುರಿ ಇದೆ ಎಂದು ಸಾರಿಗೆ ಇಲಾಖೆಯ ರಾಜಸ್ವ ಪರಿಶೀಲನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ಶಕ್ತಿ ಭವನದಲ್ಲಿ ನಡೆದ ನೋಂದಣಿ ಮತ್ತು ಮುದ್ರಾಂಕ ಹಾಗೂ ಸಾರಿಗೆ ಇಲಾಖೆಯ 2024-25 ನೇ ಸಾಲಿನ ರಾಜಸ್ವ ಸಂಗ್ರಹ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದದು.
ಸಭೆಯಲ್ಲಿ ಹಿಂದಿನ ಸಾಲಿಗಿಂತ ಈ ಅವಧಿಯಲ್ಲಿ ಹೆಚ್ಚುವರಿ ರಾಜಸ್ವ ಸಂಗ್ರಹವಾಗಿದೆ. 308.98 ಕೋಟಿ ಹೆಚ್ಚುವರಿ ರಾಜಸ್ವ ಸಂಗ್ರಹ ಆಗಿದೆ. ಮಾಸಿಕ ಗುರಿ ನಿಗದಿಪಡಿಸಿಕೊಂಡು ನಿಗದಿತ ಗುರಿ ಸಾಧಿಸಬೇಕು.ಮಾರ್ಚ್ ಅಂತ್ಯದೊಳಗೆ ನಿಗದಿತ ಗುರಿ ಸಾಧಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಾರಿಗೆ ಇಲಾಖೆಯ ರಾಜ್ಯಸ್ವ ಪರಿಶೀಲನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಇಲಾಖೆಯು 26,000 ಕೋಟಿ ರಾಜಸ್ವ ಸಂಗ್ರಹ ಗುರಿ ಹೊಂದಿದೆ. ಅಕ್ಟೋಬರ್ ತಿಂಗಳ ಅಂತ್ಯದವರೆಗೆ 13,724 ಕೋಟಿ ಸಂಗ್ರಹ ಆಗಿದೆ. ಮಾರ್ಚ್ ವರೆಗೆ ಪ್ರತಿ ತಿಂಗಳು 2400 ಕೋಟಿ ರಾಜಸ್ವ ಸಂಗ್ರಹ ಗುರಿ ಸಾಧಿಸಬೇಕು. ಪ್ರತಿ ತಿಂಗಳು 2400 ಕೋಟಿ ಗುರಿ ಸಾಧಿಸಬೇಕು. ನೋಂದಣಿಯೇತರ ದಸ್ತಾವೇಜುಗಳಿಗೆ ಸರಿಯಾದ ಮುದ್ರಾಂಕ ಶುಲ್ಕ ಪಾವತಿಸಿಕೊಂಡು ಹೆಚ್ಚಿನ ರಾಜಸ್ವ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.