ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ಬೆಳೆಗಳ ತೋಟಗಳ ಅಭಿವೃದ್ಧಿಪಡಿಸಲು ಅರ್ಜಿ ಆಹ್ವಾನಿಸಲಾಗಿದೆ.
2025-26ನೇ ಸಾಲಿನ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಅಡಿಕೆ, ಬಾಳೆ, ತೆಂಗು, ಕರಿಬೇವು, ನಿಂಬೆ, ನುಗ್ಗೆ ಮತ್ತು ಇನ್ನಿತರೆ ತೋಟಗಾರಿಕೆ ಬೆಳೆಗಳ ಹೊಸ ತೋಟಗಳ ಅಭಿವೃದ್ಧಿ ಪಡಿಸಲು ಹಾಗೂ ಬದುವಿನ ಸುತ್ತ ತೆಂಗು ನೆಡಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಎಲ್ಲಾ ಸಾಮಾನ್ಯ ವರ್ಗದ ಸಣ್ಣ ಹಿಡುವಳಿದಾರ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ಅಕ್ಟೋಬರ್ 30, 2024 ರೊಳಗಾಗಿ ಸಂಬಂಧಪಟ್ಟ ಗ್ರಾಮ ಪಂಚಾಯತಿ ಕಾರ್ಯಾಲಯ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಕಲಘಟಗಿ ಕಚೇರಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 08370-284468 ಗೆ ಸಂಪರ್ಕಿಸಬಹುದು ಎಂದು ಕಲಘಟಗಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.