ಮುಂಬೈ : ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೊಮ್ಮೆ ಜೀವ ಬೆದರಿಕೆ ಬಂದಿದೆ. ಕಳೆದ ಮಂಗಳವಾರ (ಅಕ್ಟೋಬರ್ 29) ಟ್ರಾಫಿಕ್ ನಿಯಂತ್ರಣಕ್ಕೆ ಸಂದೇಶವೊಂದು ಬಂದಿದ್ದು ಅದರಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ್ದಾನೆ.
ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ, ಸಂದೇಶ ಕಳುಹಿಸಿದ್ದ ವ್ಯಕ್ತಿ 2 ಕೋಟಿ ರೂ. ಹಣ ಸಿಗದಿದ್ದರೆ ಸಲ್ಮಾನ್ ಖಾನ್ ನನ್ನು ಸಾಯಿಸುವುದಾಗಿ ಮೆಸೇಜ್ ಮಾಡಿದ ವ್ಯಕ್ತಿಯೂ ಹೇಳಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವರ್ಲಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಬಿಎನ್‌ಎಸ್ ಸೆಕ್ಷನ್ 354 (2), 308 (4) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.