ಬಳ್ಳಾರಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದು, ಜಾಮೀನು ಪ್ರತಿಯನ್ನು ಸಿಟಿ ಸಿವಿಲ್ ಕೋರ್ಟ್ ಗೆ ದರ್ಶನ್ ಪರ ವಕೀಲರು ತಂದಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ದರ್ಶನ್ 131 ದಿನಗಳ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಇದೀಗ ದರ್ಶನ್ ಪರ ವಕೀಲರು ಜಾಮೀನು ಆದೇಶದ ಪ್ರತಿಯನ್ನು ಸಿಟಿ ಸಿವಿಲ್ ಕೋರ್ಟ್ ಗೆ ತಲುಪಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದರು. ಅವರು ತಮ್ಮ ವಕೀಲರ ಮೂಲಕ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ನಡೆಸಿತು. ನಟ ದರ್ಶನ್ ಪರವಾಗಿ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು ವಾದಿಸಿದರು.