ಹಾವೇರಿ : ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿಲ್ಲವೆಂದು ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಬಂಡಾಯ ಅಭ್ಯರ್ಥಿಯಾಗಿ ಶಿಗ್ಗಾವಿ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದರು. ಇದೀಗ ಬಂಡಾಯ ಶಮನವಾಗಿದ್ದು, ಅಜ್ಜಂಪೀರ್ ಖಾದ್ರಿ ನಾಮಪತ್ರ ವಾಪಸ್ ಪಡೆದಿದ್ದಾರೆ.
ಕಳೆದ ಕೆಲವು ದಿನಗಳಿಂದ ಅಜ್ಜಂಪೀರ್ ಖಾದ್ರಿ ಬೆಂಗಳೂರಿನ ಸಚಿವ ಜಮೀರ್ ಅಹ್ಮದ್ ಖಾನ್ ಸರ್ಕಾರಿ ನಿವಾಸದಲ್ಲಿ ಇದ್ದರು. ಡಿಸಿ ಡಿಕೆ ಶಿವಕುಮಾರ್ ಅವರ ಜೊತೆಗೆ ಅಜ್ಜಂಪೀರ್ ಖಾದ್ರಿ ಸಂಧಾನ ಯಶಸ್ವಿಯಾದ ಬೆನ್ನಲ್ಲೆ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ತಮ್ಮ ನಿವಾಸದಲ್ಲಿ ಇರಿಸಿಕೊಂಡಿದ್ದರು ಇಂದು ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೊತೆಗೆ ಬಂದು ನಾಮಪತ್ರ ವಾಪಸ್ ಪಡೆದಿದ್ದಾರೆ.