ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಐರಾವತ ಕ್ಲಬ್ ಕ್ಲಾಸ್ 2.0 (ವೋಲ್ವೋ -9600) 20 ಬಸ್ಸುಗಳನ್ನು ಸಾರ್ವಜನಿಕರ ಸೇವೆಗೆ ಕಾರ್ಯಾಚರಣೆ ಮಾಡಲು ಉದ್ದೇಶಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನೂತನ ಬಸ್ ಗಳಿಗೆ ಚಾಲನೆ ನೀಡಿದ್ದಾರೆ.
ವಿಧಾನಸೌಧದ ಬಳಿ ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 20 ನೂತನ ವೋಲ್ವೋ ಐರಾವತ ಕ್ಲಬ್ ಕ್ಲಾಸ್ 2.0 ವಾಹನಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ರಾಜ್ಯ ಸಾರಿಗೆ ಸಂಸ್ಥೆಯು ಖಾಸಗಿ ಸಂಸ್ಥೆಗಳನ್ನೂ ಮೀರಿಸಬಲ್ಲ ಗುಣಮಟ್ಟದ ಸೇವೆಗಳನ್ನು ನೀಡುತ್ತಿದೆ. ನಾವು ಶಕ್ತಿ ಯೋಜನೆಯ ಮೂಲಕ ಹೆಣ್ಣುಮಕ್ಕಳು ಉಚಿತವಾಗಿ ಬಸ್ನಲ್ಲಿ ಪ್ರಯಾಣ ಮಾಡುವ ಅವಕಾಶ ಕಲ್ಪಿಸಲಾಗಿದೆ.