ಬೆಂಗಳೂರು : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರಮುಖ 5 ಗ್ಯಾರಂಟಿಗಳನ್ನು ಜಾರಿಗೆ ಮಾಡಿದೆ ಅದರಲ್ಲಿ ಮಹಿಳೆಯರಿಗೆ ವಿಶೇಷವಾಗಿ ಬಸ್ ನಲ್ಲಿ ಉಚಿತ ಪ್ರಯಾಣ ಮಾಡುವುದಕ್ಕೆ ಶಕ್ತಿ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆ ಪ್ರಮುಖವಾಗಿವೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರು ಶಕ್ತಿ ಯೋಜನೆ ನಿಲ್ಲಿಸಿ ಮೊದಲಿನಂತೆ ಟಿಕೆಟ್ ವ್ಯವಸ್ಥೆ ಜಾರಿ ಮಾಡುವುದರ ಕುರಿತು ಸುಳಿವು ನೀಡಿದ್ದಾರೆ ಎನ್ನಲಾಗಿದೆ.
ಹೌದು, ಈ ಕುರಿತಂತೆ ವಿಧಾನಸೌಧದ ಗ್ರ‍್ಯಾಂಡ್ ಮೆಟ್ಟಿಲು ಮೇಲೆ ನಡೆದ ಐರಾವತ ಕ್ಲಬ್ ಕ್ಲಾಸ್ 2.0 ಬಸ್ ಉದ್ಘಾಟನೆ ವೇಳೆ ಮಾತನಾಡಿದ ಡಿಸಿಎಂ, ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ಕುರಿತು ಮಾತನಾಡಿದ್ದು, ಮತ್ತೆ ಟಿಕೆಟ್ ವ್ಯವಸ್ಥೆ ಜಾರಿ ಆಗುವ ಸುಳಿವು ಕೊಟ್ಟಿದ್ದಾರೆ.
ನನಗೆ ಅನೇಕರು ಇಮೇಲ್ ಮುಖಾಂತರ ಹಾಗೂ ಮೆಸೇಜ್ ಮಾಡಿ ನಾವು ಬಸ್ನಲ್ಲಿ ದುಡ್ಡು ಕೊಟ್ಟು ಟಿಕೆಟ್ ತೆಗೆದುಕೊಳ್ಳುತ್ತೇವೆ ಉಚಿತ ಪ್ರಯಾಣ ಬೇಡ. ನಾವು ಹಣ ಕೊಟ್ಟು ಟಿಕೆಟ್ ತೆಗೆದುಕೊಳ್ಳುತ್ತೇವೆ ಆದರೆ ಬಸ್ ನಲ್ಲಿ ಟಿಕೆಟ್ ಪಡೆದುಕೊಂಡರು ಹಣ ತೆಗೆದುಕೊಳ್ಳುತ್ತಿಲ್ಲ ಎಂದು ಮೆಸೇಜ್ ಮಾಡಿದ್ದಾರೆ. ಹಾಗಾಗಿ ಈ ಕುರಿತಂತೆ ಸಚಿವರಾಗಲಿಂಗಾರೆಡ್ಡಿ ಹಾಗೂ ಸರ್ಕಾರದ ಜೊತೆಗೆ ಕೂತು ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.