ಮಡಿಕೇರಿ : ಇತ್ತೀಚಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಇತ್ತೀಚೆಗೆ ಅಮರಾವತಿಯಲ್ಲಿ ಆಂಧ್ರ ಪ್ರದೇಶದ ರಾಜಧಾನಿ ನಿರ್ಮಾಣ ಕಾರ್ಯವನ್ನು ಪುನರಾರಂಭಿಸಿದ ನಂತರ, ತಮ್ಮ ಸರ್ಕಾರವು ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಮಾತ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಅನುಮತಿ ನೀಡುವ ಶಾಸನವನ್ನು ಪರಿಚಯಿಸಲು ಉದ್ದೇಶಿಸಲಾಗಿದೆ ಎಂದು ಘೋಷಿಸಿದ್ದರು.
ಇದೀಗ ಕರ್ನಾಟಕ ರಾಜ್ಯದಲ್ಲಿ ಈ ಒಂದು ಜಿಲ್ಲೆಯಲ್ಲಿ ಒಂದು ಸಮಾಜವು ನಾಲ್ಕು ಮಕ್ಕಳನ್ನು ಹೆತ್ತರೆ ಒಂದು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದೆ. ಆ ಜಿಲ್ಲೆ ಯಾವುದು ಹಾಗೂ ಆ ಸಮಾಜ ಯಾವುದು ಅಂತ ತಿಳಿದುಕೊಳ್ಳಬೇಕಾ? ಅದೇ ಮಡಿಕೇರಿ ಜಿಲ್ಲೆಯ ಕೊಡಗಿನಲ್ಲಿ ಕೊಡವ ಸಂಸ್ಕೃತಿ ಉಳಿಸಲು ವಿಶಿಷ್ಟ ಪ್ರಯತ್ನವೊಂದನ್ನು ಕೈಗೊಳ್ಳಲಾಗಿದೆ. ಮನೆ ತುಂಬಾ ಮಕ್ಕಳು ಮಾಡುವ ಪೋಷಕರಿಗೆ 25 ಸಾವಿರ ರೂ.ದಿಂದ ಒಂದು ಲಕ್ಷ ರೂ. ದವರೆಗೆ ಬಹುಮಾನ ನೀಡಲಾಗುತ್ತಿದೆ.
ಹೌದು ಪೊನ್ನಂಪೇಟೆ ತಾಲ್ಲೂಕಿನ ಟಿ ಶೆಟ್ಟಿಗೇರಿ ಕೊಡವ ಸಮಾಜ ಈ ವಿಶಿಷ್ಟ ಆಫರ್ ನೀಡಿದೆ. ಯಾವ ಕೊಡವ ಕುಟುಂಬದ ಮೂರು ಮಕ್ಕಳಿಗೆ ಜನ್ಮ ನೀಡುವ ಪೋಷಕರಿಗೆ ಅವರಿಗೆ 50 ಸಾವಿರ ರೂ ಬಹುಮಾನ, 4 ಮಕ್ಕಳು ಮಾಡಿಕೊಳ್ಳುವ ಪೋಷಕರಿಗೆ 1 ಲಕ್ಷ ರೂ ಬಹುಮಾನ ನೀಡುವುದಾಗಿ ಘೋಷಿಸಲಾಗಿದೆ. ಈ ಹಣವನ್ನ ಆ ಮಗುವಿನ ಹೆಸರಲ್ಲಿ ಬ್ಯಾಂಕ್ನಲ್ಲಿ ಡಿಪಾಸಿಟ್ ಇಟ್ಟು 18 ವರ್ಷ ತುಂಬಿದ ಬಳಿಕ ನೀಡುವುದಾಗಿ ಪ್ರಕಟಿಸಲಾಗಿದೆ.
ಕೊಡಗು ಜಿಲ್ಲೆ ಅತಿ ವಿಶಿಷ್ಟ ಸಂಸ್ಕೃತಿ ಪದ್ಧತಿ ಪರಂಪರೆಗೆ ಹೆಸರಾದ ಜಿಲ್ಲೆ. ಇಲ್ಲಿನ ಕೊಡವ ಸಂಸ್ಕೃತಿ ವಿಶ್ವ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ಹಾಗಾಗಿಯೇ ಸಾಂಸ್ಕೃತಿಕವಾಗಿ ಕೊಡಗು ಜಿಲ್ಲೆ ಅತಿಸೂಕ್ಷ್ಮ ಪ್ರದೇಶ ಅಂತಾನೇ ಪರಿಗಣಿತವಾಗಿದೆ. ಆದರೆ ಇತ್ತೀಚಿನ ವರ್ಷಗಳಿಂದ ಕೊಡವರು ಸಾಂಸ್ಕೃತಿಕವಾಗಿ ಅದಃಪತನದತ್ತ ಸಾಗುತ್ತಿದ್ದಾರೆ ಅನ್ನೋ ಆತಂಕ ಜನರನ್ನ ಕಾಡುತ್ತಿದೆ. ಎಲ್ಲರೂ ತಮ್ಮ ಉದ್ಯೋಗಕ್ಕಾಗಿ ದೂರದ ಊರಿಗೆ ತೆರಳಿ ಅಲ್ಲೇ ಜೀವನ ಮಾಡುತ್ತಿದ್ದಾರೆ. ಜೊತೆಗೆ ಒಂದೇ ಮಗು ಸಾಕು ಅಂತ ನಿರ್ಬಂಧ ಹಾಕಿಕೊಳ್ಳುತ್ತಿದ್ದಾರೆ.
ಜಿಲ್ಲೆಯಲ್ಲಿ ನೆಲೆಸಿರುವ ಬಹಳಷ್ಟು ಕೊಡವ ಯುವಕರು ವಿವಾಹಕ್ಕೆ ಯುವತಿಯರು ಸಿಗದೆ ಅವಿವಾಹಿತರಾಗಿಯೇ ಉಳಿಯುತ್ತಿದ್ದಾರೆ. ಈ ಎಲ್ಲಾ ಸಮಸ್ಯೆಗಳ ಮಧ್ಯೆ ಕೊಡವರ ಸಂಖ್ಯೆ ಅತಿಯಾಗಿ ಇಳಿಕೆ ಆಗುತ್ತಿರುವುದು ಜನಾಂಗದ ಹಿರಿಯರಲ್ಲಿ ಆತಂಕ ಮೂಡಿಸಿದೆ. ಹಾಗಾಗಿಯೇ ಜನಾಂಗದ ಹಿರಿಯರು ಕೊಡವ ಜನಾಂಗದ ಜನಸಂಖ್ಯೆ ಬೆಳೆಸಲು ಇಂತಹ ಒಂದು ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇದಕ್ಕೆ ಕೊಡವ ಯುವ ಜನತೆಯಿಂದಲೂ ಬೆಂಬಲ ವ್ಯಕ್ತವಾಗಿದೆ.