ಬೆಂಗಳೂರು : ವಿಧಾನಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ವಿಧಾನಪರಿಷತ್ನ ನೂತನ ಸದಸ್ಯರಾಗಿ ಭಗವಂತ ಹಾಗೂ ತಾಯಿ ಭಾರತಾಂಬೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ವಿಧಾನಪರಿಷತ್ತಿನ ಮಾನ್ಯ ಸಭಾಪತಿಗಳಾದ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಅವರು ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದಗೌಡ, ವಿಧಾನಪರಿಷತ್ನ ಕಾರ್ಯದರ್ಶಿಗಳಾದ ಕೆ.ಆರ್.ಮಹಾಲಕ್ಷ್ಮಿ ಸೇರಿದಂತೆ ಶಾಸಕರು, ವಿಧಾನಪರಿಷತ್ನ ಸದಸ್ಯರು ಉಪಸ್ಥಿತರಿದ್ದರು.
ಚುನಾವಣೆಗಾಗಿ ಬಿಜೆಪಿಯವರು ವಿವಾದದ ಸೃಷ್ಟಿಸುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ
`KSRTC’ ಪ್ರಯಾಣಿಕರಿಗೆ ಗುಡ್ ನ್ಯೂಸ್ : `ಐರಾವತ ಕ್ಲಬ್ ಕ್ಲಾಸ್ 2.0′ ಬಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ