ಬೆಂಗಳೂರು : ಪ್ರತಿ ವರ್ಷ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಯವ ಆಚರಿಸಲಾಗುತ್ತದೆ. ಕರ್ನಾಟಕ ರಾಜ್ಯ ಉದಯವಾಗಿ 50 ವರ್ಷವಾದ ಹಿನ್ನೆಲೆಯಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವನ್ನು ಬಹಳಷ್ಟು ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದಂತೆ, ಬೆಂಗಳೂರಿನ ಎಲ್ಲಾ ಐಟಿ ಕಂಪನಿಗಳ ಮೇಲೆ ಕನ್ನಡ ಬಾವುಟ ಹಾರಿಸುವುದು ಕಡ್ಡಾಯ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಹೌದು ನವೆಂಬರ್ 1ರಂದು ಎಲ್ಲ ಶಾಲೆ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಚೇರಿಗಳ ಕಟ್ಟಡ ಮೇಲೆ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಲೇಬೇಕು.ಬೆಂಗಳೂರು ಜಿಲ್ಲೆಯಲ್ಲಿ ಶೇ50 ರಷ್ಟು ಜನ ಹೊರಗಿನಿಂದ ಬಂದಿದ್ದಾರೆ. ಹೊರಗಿನಿಂದ ಬಂದವರು ಸಹ ಕನ್ನಡ ಕಲಿಯಬೇಕು ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಮಾಡಬೇಕು. ರಾಷ್ಟ್ರ ಧ್ವಜದ ರೀತಿ ಕನ್ನಡ ಬಾವುಟಕ್ಕೆ ಗೌರವ ಕೊಡಬೇಕು. ಬಾವುಟ ಹಾರಿಸುವ ಮೂಲಕ ಶ್ರದ್ಧಾ, ಭಕ್ತಿ ಗೌರವ ತೋರಿಸಬೇಕು ಎಂದು ಹೇಳಿದ್ದರು.ಆಚರಣೆ ಮಾಡದ ಸಂಸ್ಥೆ ವಿರುದ್ಧ ಯಾವ ರೀತಿ ಕ್ರಮ ಕೈಗೊಳ್ಳಬೇಕು ಅಂತ ಸರ್ಕಾರ ನಿರ್ಧಾರ ಮಾಡುತ್ತೆ. ಕನ್ನಡ ಸಂಘಟನೆಗಳು ಖಾಸಗಿ ಸಂಸ್ಥೆಗಳ ಬಳಿ ಹೋಗಿ ಗಲಾಟೆ, ಬೆದರಿಸುವುದು ಬೇಡ ಎಂದು ಎಚ್ಚರಿಕೆ ನೀಡಿದ್ದಾರೆ.