ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಹೊಸ ಮೆಟ್ರೋ ಫೀಡರ್ ಮಾರ್ಗದಲ್ಲಿ ಬಿಎಂಟಿಸಿ ಬಸ್ ಸಂಚಾರವನ್ನು ಆರಂಭಿಸಲಾಗಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮಧಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ.
ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಣರಹಿತ ಸೇವೆಯಲ್ಲಿ ನೂತನ ಮೆಟ್ರೋ ಫೀಡರ್ ಮಾರ್ಗವನ್ನು ದಿನಾಂಕ 04.11.2024 ರಿಂದ ಪರಿಚಯಿಸಲಾಗುತ್ತಿದೆ. ವಿವರ ಕೆಳಕಂಡಂತಿದೆ:
ಮಾರ್ಗ ಸಂಖ್ಯೆ | ಎಲ್ಲಿಂದ | ಎಲ್ಲಿಗೆ | ಮಾರ್ಗ | ಬಸ್ಸುಗಳ ಸಂಖ್ಯೆ/ಸುತ್ತುವಳಿ
|
ಎಂಎಫ್-38 | ರಾಜರಾಜೇಶ್ವರಿ ನಗರ ಮೆಟ್ರೋ ನಿಲ್ದಾಣ | ರಾಜರಾಜೇಶ್ವರಿ ನಗರ ಮೆಟ್ರೋ ನಿಲ್ದಾಣ | ಜವರೇಗೌಡನಗರ, ವಿ ಲೆಗ್ಗೆಸಿ ಕನ್ವೆನ್ಷನ್ ಹಾಲ್ ರಸ್ತೆ, ಡಿಸೋಜನಗರ, ನಾಯಂಡನಹಳ್ಳಿ. | 01 ಬಸ್ಸು |
ಸದರಿ ಮಾರ್ಗದ ವೇಳಾಪಟ್ಟಿ ವಿವರಗಳು ಈ ಕೆಳಗಿನಂತಿದೆ.
ಮಾರ್ಗ ಸಂಖ್ಯೆ ಎಂಎಫ್-38
ರಾಜರಾಜೇಶ್ವರಿ ನಗರ ಮೆಟ್ರೋ ನಿಲ್ದಾಣ ಬಿಡುವ ವೇಳೆ |
7:40, 8:10, 8:40, 9:10, 9:40, 10:30, 16:15, 17:00, 17:30, 18:00, 18:30, 19:00, 19:30, 20:00 |
`KSRTC’ ಪ್ರಯಾಣಿಕರಿಗೆ ಗುಡ್ ನ್ಯೂಸ್ : `ಐರಾವತ ಕ್ಲಬ್ ಕ್ಲಾಸ್ 2.0′ ಬಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ
UGNEET-24 ವೈದ್ಯಕೀಯ ಕೋರ್ಸ್ ಸ್ಟೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಪ್ರಕಟ