ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
ಬೆಂಗಳೂರು: 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. 69 ಸಾಧಕರಿಗೆ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ಹಂಚಿಕೊಂಡಂತ ಸಚಿವ ಶಿವರಾಜ್ ತಂಡರಗಿ ಅವರು, ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗಾಗಿ ಒಟ್ಟು 1 575 ಭೌತಿಕ ಅರ್ಜಿಗಳು ಬಂದಿದ್ದವು. ಇದಲ್ಲದೇ ಸೇವಾ ಸಿಂಧೂ ಮೂಲಕ 1309 ಜನರಿಗಾಗಿ 7,438 ನಾಮನಿರ್ದೇಶನಗಳು ಸಲ್ಲಿಕೆಯಾಗಿದ್ದವು. ಇವುಗಳನ್ನೆಲ್ಲಾ ಕೂಲಂಕುಷವಾಗಿ ಪರಿಶೀಲನೆ ಮಾಡಿ ಅರ್ಹರ ಆಯ್ಕೆ ಮಾಡಲಾಗಿದೆ ಎಂದರು.
1. ಈ ಬಾರಿ 69 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
2. ಪ್ರತಿಯೊಂದು ಜಿಲ್ಲೆಗೂ ಪ್ರಾತಿನಿದ್ಯ ನೀಡಲಾಗಿದೆ ಹಾಗೂ ಸಾಮಾಜಿಕ ನ್ಯಾಯವನ್ನು ಕಾಪಾಡಿಕೊಳ್ಳಲಾಗಿದೆ.
3. ಈ ವರ್ಷ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ವರ್ಷ ಆಗಿರುವುದರಿಂದ ಇದನ್ನು ವಿಶೇಷ ಸಂದರ್ಭ ಎಂದು ಪರಿಗಣಿಸಿ ಸುವರ್ಣ ಸಂಭ್ರಮ-50ರ ಸುವರ್ಣ ಮಹೋತ್ಸವ ಎಂಬ ವಿಶೇಷ ಪ್ರಶಸ್ತಿಯನ್ನು 50 ಸಾಧಕ ಮಹಿಳೆಯರಿಗೆ ಮತ್ತು 50 ಪುರುಷರಿಗೆ ನೀಡಲಾಗುತ್ತಿದೆ. ಇದರಿಂದ 69 + 100 ಒಟ್ಟು 169 ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.
4. ಅರ್ಜಿಯನ್ನು ಹಾಕದ ಎಲೆಮರೆಯ ಕಾಯಿಯಂತೆ, ಸೇವೆ ಸಲ್ಲಿಸಿರುವ 20ಕ್ಕೂ ಹೆಚ್ಚು ಮಂದಿಯನ್ನು ಸಹ ಗುರುತಿಸಿ, ಪ್ರಶಸ್ತಿ ನೀಡಲಾಗುತ್ತಿದೆ.
5. ಬಯಲಾಟ ಕ್ಷೇತ್ರದಲ್ಲಿ 92 ವರ್ಷದ ಶ್ರೀ ನಾರಾಯಣಪ್ಪ ಶಿಳ್ಳೇಕ್ಯಾತ, ವಿಜಯನಗರ ಜಿಲ್ಲೆ. ಇವರ ಹೆಸರನ್ನು ಸಹ ಪರಿಗಣಿಸಲಾಗಿದೆ.
6. ಜಾನಪದ ಕ್ಷೇತ್ರದಲ್ಲಿ ಅಂದಕಲಾವಿದರಾದ ಶ್ರೀ ನರಸಿಂಹಲು, ಬೀದರ್ ಜಿಲ್ಲೆ ಇವರನ್ನು ಸಹ ಪರಿಗಣಿಸಲಾಗಿದೆ.
7. ಇದರಲ್ಲಿ 13 ಮಹಿಳೆಯರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.
ಹೀಗಿದೆ 69 ಮಂದಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ