ಬೆಂಗಳೂರು : ಕರ್ನಾಟಕದಲ್ಲಿ ವಕ್ಫ್ ಮಂಡಳಿಯಿಂದ ರೈತರಿಗೆ ನೋಟಿಸ್ ನೀಡಿರುವ ವಿಚಾರದ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಜಂಟಿ ಸಂಸದೀಯ ಮಂಡಳಿಗೆ ಪತ್ರ ಬರೆದಿದ್ದಾರೆ. ರೈತರ ಸಮಸ್ಯೆಗಳನ್ನು ಆಲಿಸಲು ಕೇಂದ್ರ ಸರ್ಕಾರದಿಂದ ಈಗಾಗಲೇ ರಚಿಸಲಾದ ವಕ್ಫ್ ತಿದ್ದುಪಡಿ ಕಾಯ್ದೆಯ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣ X ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಜೆಪಿಸಿ ಅಧ್ಯಕ್ಷ ಶ್ರೀ ಜಗದಾಂಬಿಕಾ ಪಾಲ್ ಜಿ ಅವರಿಗೆ ಪತ್ರ ಬರೆದು, ವಿಜಯಪುರ ಜಿಲ್ಲೆ ಮತ್ತು ಕರ್ನಾಟಕದ ಸುತ್ತಮುತ್ತಲಿನ ಇತರ ಪ್ರದೇಶಗಳ ರೈತರು ತಮ್ಮ ಭೂಮಿಯನ್ನು ವಕ್ಫ್ ಆಸ್ತಿ ಎಂದು ತಪ್ಪಾಗಿ ನೋಟಿಸ್ ಜಾರಿಗೊಳಿಸಿರುವ ಬಗ್ಗೆ ಗಮನ ಸೆಳೆದಿದ್ದಾರೆ.
ನೋಟಿಸ್‌ಗಳ ಹೊರತಾಗಿ, ಕಾನೂನು ಪ್ರಕ್ರಿಯೆಗಳನ್ನು ಅನುಸರಿಸದೆ ಕೆಲವು ಜಮೀನುಗಳ ಆರ್‌ಟಿಸಿ, ಪಹಣಿ ಮತ್ತು ಮ್ಯುಟೇಶನ್ ರಿಜಿಸ್ಟರ್‌ಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ.ಸಮಿತಿಯ ಮುಂದೆ ಸಾಕ್ಷಿಗಳಾಗಿ ಈ ರೈತರ ನಿಯೋಗವನ್ನು ಆಹ್ವಾನಿಸಲು ಮತ್ತು ಈ ಸಮಸ್ಯೆಯ ಪ್ರಮಾಣವನ್ನು ನೇರವಾಗಿ ಅರ್ಥಮಾಡಿಕೊಳ್ಳಲು ಸಾರ್ವಜನಿಕ ವಿಚಾರಣೆಗಾಗಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಅವರನ್ನು ಮನವಿ ಮಾಡಿಕೊಂಡಿದ್ದಾರೆ.
Have written to the Chairperson of the JPC on Waqf Amendment Bill Shri Jagdambika Pal Ji, drawing attention to the plight of farmers from Vijayapura District & other areas in the vicinity in Karnataka, who have been wrongfully served notices claiming their land as Waqf property.… pic.twitter.com/PyiE29kmuI
— Tejasvi Surya (@Tejasvi_Surya) October 30, 2024