ಬೆಂಗಳೂರು : ಯುವಕನ ಮೇಲೆ ದುಷ್ಕರ್ಮಿಗಳು ಲಾಂಗು ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಿದ್ದು, ಯುಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಿನ್ನೆ ರಾತ್ರಿ ಬೆಂಗಳೂರಿನ ಬ್ಯಾಡರಹಳ್ಳಿಯ ಮುನೇಶ್ವರ ನಗರದಲ್ಲಿ ಈ ಒಂದು ಘಟನೆ ನಡೆದಿದೆ.
ಹೌದು ಬೆಂಗಳೂರಿನಲ್ಲಿ ಅರುಣ್ ಎನ್ನುವ ಯುವಕನ ಮೇಲೆ ಮನಸ್ಸು ಇಚ್ಛೆ ಹಲ್ಲೆ ನಡೆಸಿದ್ದಾರೆ. ಲಾಂಗು ಮಚ್ಚುಗಳಿಂದ ನಡು ರಸ್ತೆಯಲ್ಲಿ ಡೆಡ್ಲಿ ಅಟ್ಯಾಕ್ ಮಾಡಲಾಗಿದೆ. ಬ್ಯಾಡರಹಳ್ಳಿಯ ಮುನೇಶ್ವರ ನಗರದಲ್ಲಿ ನಿನ್ನೆ ರಾತ್ರಿ ಒಂದು ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.ಮಾಹಿತಿ ಸಿಗುತ್ತಿದ್ದಂತೆ ಘಟನೆಕ್ಕೆ ಹೊಯ್ಸಳ ಪೊಲೀಸರು ಆಗಮಿಸಿದ್ದಾರೆ.
ನಿನ್ನೆ ಸಂಜೆ ಹೆಗ್ಗನಹಳ್ಳಿ ಕಡೆಗೆ ಅರುಣ್ ಹೋಗಿದ್ದ. ಅಲ್ಲಿ ಕೆಲ ಯುವಕರ ಜೊತೆಗೆ ಗಲಾಟೆ ಮಾಡಿಕೊಂಡಿದ್ದ ಎನ್ನಲಾಗಿದೆ. ಬಳಿಕ ಕೆಲವರು ಫಾಲೋ ಮಾಡಿಕೊಂಡು ಬಂದು ಅರುಣ್ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ನಡೆಸಿದ ಬಳಿಕ ಎಸ್ಕೇಪ್ ಆಗಿದ್ದಾರೆ, ಇದೀಗ ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಹಲ್ಲೆ ನಡೆದ ವೇಳೆ ನಡು ರಸ್ತೆಯಲ್ಲೇ ರಕ್ತದ ಮಡುವಿನಲ್ಲಿ ಬಿದ್ದು ಯುವಕ ಅರುಣ್ ಒದ್ದಾಡುತ್ತಿದ್ದ. ಯುವಕ ನರಳಾಡುತ್ತಿದ್ದರು ಕೂಡ ಪೊಲೀಸರು ಸುಮ್ಮನೆ ನಿಂತಿದ್ದಾರೆ. ಈ ವೇಳೆ ಯುವಕನ ನೆರವಿಗೆ ಪೊಲೀಸರು ಬಂದಿಲ್ಲ ಎಂದು ಆರೋಪಿಸಲಾಗಿದೆ.ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.