ಗುಜರಾತ್ : ಇಂದು ಭಾರತದ ಉಕ್ಕಿನ ಮನುಷ್ಯ ಸರದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನ. ಅಲ್ಲದೆ ರಾಷ್ಟ್ರೀಯ ಏಕತಾ ದಿನಾಚರಣೆ ಹಿನ್ನೆಲೆಯಲ್ಲಿ ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿಯವರು ಮಾತನಾಡಿದ್ದು, ಶೀಘ್ರದಲ್ಲಿ ಒಂದು ದೇಶ ಒಂದು ಚುನಾವಣೆ ಜಾರಿ ಮಾಡಲಾಗುತ್ತದೆ ಎಂದು ತಿಳಿಸಿದರು.
ಇಂದು ಅವರು ಗುಜರಾತನ ಕೆವಡಿಯಾದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನದ ಅಂಗವಾಗಿ ಮಾತನಾಡಿದ ಅವರು, ಇಡೀ ದೇಶವನ್ನು ಒಂದಾಗಿ ಮಾಡಿದ್ದು ಸರ್ದಾರ್ ವಲ್ಲಭಭಾಯಿ ಪಟೇಲ್. ಅವರು ದೇಶದ ಏಕತೆ ರಕ್ಷಣೆಗಾಗಿ ಶ್ರಮಿಸಿದ ಉಕ್ಕಿನ ಮನುಷ್ಯ. ಸರ್ದಾರ್ ವಲ್ಲಭ ಭಾಯಿ ಪಟೇಲ್ ಸೇವೆ ಎಲ್ಲರಿಗೂ ಸ್ಪೂರ್ತಿಯಾಗಿದೆ. ಎಂದು ಗುಜರಾತಿನ ಕೇವಾಡಿಯದಲ್ಲಿ ನರೇಂದ್ರ ಮೋದಿ ಹೇಳಿಕೆ ನೀಡಿದರು.
ಇದೇ ವೇಳೆ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲದೆ ಒಂದು ದೇಶ ಒಂದು ಚುನಾವಣೆಯನ್ನು ಕೂಡ ಶೀಘ್ರದಲ್ಲಿ ಜಾರಿಗೊಳಿಸಲಾಗುತ್ತದೆ ಎಂದು ಗುಜರಾತಿನ ಕೇವಾಡಿಯದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಿಳಿಸಿದರು.
ನಾವು ಒನ್ ನೇಷನ್ ಒನ್ ಪವರ್ ಗ್ರಿಡ್ ಮೂಲಕ ದೇಶದ ವಿದ್ಯುತ್ ವಲಯವನ್ನು ಬಲಪಡಿಸಿದ್ದೇವೆ. ನಾವು ಬಡವರಿಗೆ ಲಭ್ಯವಿರುವ ಸೌಲಭ್ಯಗಳನ್ನು ಒನ್ ನೇಷನ್ ಒನ್ ರೇಷನ್ ಕಾರ್ಡ್ ಮೂಲಕ ಸಂಯೋಜಿಸಿದ್ದೇವೆ. ನಾವು ಆಯುಷ್ಮಾನ್ ಭಾರತ್ ರೂಪದಲ್ಲಿ ದೇಶದ ಜನರಿಗೆ ಒಂದು ರಾಷ್ಟ್ರ ಒಂದು ಆರೋಗ್ಯ ವಿಮೆಯ ಸೌಲಭ್ಯವನ್ನು ಒದಗಿಸಿದ್ದೇವೆ.
ಏಕತೆಗಾಗಿ ನಮ್ಮ ಈ ಪ್ರಯತ್ನಗಳ ಅಡಿಯಲ್ಲಿ, ನಾವು ಈಗ ಒಂದು ರಾಷ್ಟ್ರ ಒಂದು ಚುನಾವಣೆಯತ್ತ ಕೆಲಸ ಮಾಡುತ್ತಿದ್ದೇವೆ, ಇದು ಭಾರತದ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ, ಇದು ಭಾರತದ ಸಂಪನ್ಮೂಲಗಳ ಗರಿಷ್ಠ ಫಲಿತಾಂಶವನ್ನು ನೀಡುತ್ತದೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ಸಾಧಿಸುವಲ್ಲಿ ದೇಶವು ಹೊಸ ಆವೇಗವನ್ನು ಪಡೆಯುತ್ತದೆ. ಇಂದು, ಭಾರತವು ಜಾತ್ಯತೀತ ನಾಗರಿಕ ಸಂಹಿತೆಯಾದ ಒಂದು ರಾಷ್ಟ್ರ ನಾಗರಿಕ ಸಂಹಿತೆಯತ್ತ ಸಾಗುತ್ತಿದೆ. ಎಂದು ಪ್ರಧಾನಿ ಹೇಳಿದರು.
Rashtriya Ekta Diwas honours Sardar Patel's invaluable contributions towards unifying the nation. May this day strengthen the bonds of unity in our society.https://t.co/R5xbuPQRdE
— Narendra Modi (@narendramodi) October 31, 2024
![’ಆಕೆಯೇನಕ್ಕೆ ಅಲ್ಲಿಗೆ ಬಂದಿದ್ದಾರೆ?’: ವಿಜಯ್ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಟಿ ತ್ರಿಶಾ ವಿರುದ್ಧ ನೆಟ್ಟಿಗರ ಆಕ್ರೋಶ! ದಳಪತಿ ವಿಜಯ್ ರಾಜಕೀಯ ಪ್ರವೇಶ - [Dalapathi Vijay Politics], ತ್ರಿಶಾ ಕೃಷ್ಣನ್ ತಿಳಿ ನೀಲಿ ಸೀರೆ - [Trisha Krishnan in Blue Saree], ತಮಿಳಗ ವೆಟ್ರಿ ಕಳಗಂ ಮುಖ್ಯಮಂತ್ರಿ - [TVK Chief Minister Vijay]](https://kannadanewsnow.com/kannada/wp-content/uploads/2026/05/ವಿಜಯ್-ಪ್ರಮಾಣವಚನ-ಕಾರ್ಯಕ್ರಮದಲ್ಲಿ-ತ್ರಿಶಾ-ಕೃಷ್ಣನ್-Trisha-Krishnan-at-Vijay-Swearing-in-Ceremony-300x169.jpg)





![’ಆಕೆಯೇನಕ್ಕೆ ಅಲ್ಲಿಗೆ ಬಂದಿದ್ದಾರೆ?’: ವಿಜಯ್ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಟಿ ತ್ರಿಶಾ ವಿರುದ್ಧ ನೆಟ್ಟಿಗರ ಆಕ್ರೋಶ! ದಳಪತಿ ವಿಜಯ್ ರಾಜಕೀಯ ಪ್ರವೇಶ - [Dalapathi Vijay Politics], ತ್ರಿಶಾ ಕೃಷ್ಣನ್ ತಿಳಿ ನೀಲಿ ಸೀರೆ - [Trisha Krishnan in Blue Saree], ತಮಿಳಗ ವೆಟ್ರಿ ಕಳಗಂ ಮುಖ್ಯಮಂತ್ರಿ - [TVK Chief Minister Vijay]](https://kannadanewsnow.com/kannada/wp-content/uploads/2026/05/ವಿಜಯ್-ಪ್ರಮಾಣವಚನ-ಕಾರ್ಯಕ್ರಮದಲ್ಲಿ-ತ್ರಿಶಾ-ಕೃಷ್ಣನ್-Trisha-Krishnan-at-Vijay-Swearing-in-Ceremony-450x253.jpg)

