ಬೆಂಗಳೂರು : ಕಳೆದ ಒಂದು ವಾರಗಳ ಹಿಂದೆ ಇಡೀ ಬೆಂಗಳೂರು ನದಿಯಲ್ಲಿ ತೇಲುತ್ತಿರುವಂತೆ ಕಾಣುತ್ತಿತ್ತು ಏಕೆಂದರೆ ಅಷ್ಟು ಪ್ರಮಾಣದಲ್ಲಿ ಬೆಂಗಳೂರಿನ ನಗರದಲ್ಲಿ ಮಳೆಯಾಗಿ ನೀರು ನಿಂತು ಭಾರಿ ಆವಾಂತರ ಸೃಷ್ಟಿಯಾಗಿತ್ತು. ಇದೀಗ ಇಂದು ಬೆಳ್ಳಂ ಬೆಳಗ್ಗೆ ಬೆಂಗಳೂರಿನ ನಗರದಲ್ಲಿ ಧಾರಾಕಾರ ಮಳೆಯಾಗಿದೆ.
ಹೌದುಬೆಂಗಳೂರು ನಗರದ ಹಲವಡೆ ಧಾರಾಕಾರ ಮಳೆಯಾಗಿದ್ದು, ಶಾಂತಿನಗರ, ರಿಚ್ಮಂಡ್ ಸರ್ಕಲ್, ಕೆಆರ್ ಮಾರ್ಕೆಟ್, ಕಾರ್ಪೊರೇಷನ್, ಮೆಜೆಸ್ಟಿಕ್ ಸೇರಿದಂತೆ ಹಲವಡೆ ಮಳೆಯಾಗಿದೆ. ಈ ವೇಳೆ ಕಂಪನಿಗಳಿಗೆ ಕಚೇರಿಗಳಿಗೆ ಹಾಗೂ ಶಾಲಾ ಕಾಲೇಜುಗಳಿಗೆ ತೆರಳುವವರು ಕೆಲಕಾಲ ಪರದಾಟ ನಡೆಸಿದರು.
ಅಲ್ಲದೆ ಇಂದು ಅಕ್ಟೋಬರ್ 31 ರಿಂದ ನವೆಂಬರ್ 1 ರವರೆಗೆ ತಮಿಳುನಾಡು, ಪುದುಚೇರಿ, ಕೇರಳ, ಲಕ್ಷದ್ವೀಪ ಮತ್ತು ಕರ್ನಾಟಕದ ಪ್ರತ್ಯೇಕ ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.