ಕಲಬುರಗಿ : ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಹೂಡಾ ಬಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 5 ವರ್ಷದ ಮಗು ಮೃತಪಟ್ಟಿದ್ದು, ಹಲವರು ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ಹೂಡ ಬಿ ಗ್ರಾಮಕ್ಕೆ ಸರಬರಾಜು ಮಾಡುವ ನೀರು ಕಲುಷಿತಗೊಂಡಿದ್ದು ಎನ್ನಲಾಗಿದ್ದು, ನೀರು ಸೇವಿಸಿದ 5 ವರ್ಷದ ಬಾಲಕ ವಾಂತಿ ಭೇದಿಯಿಂದ ಅಸ್ವಸ್ಥಗೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕಿತ್ಸೆ ಫಲಿಸದೇ ಮಗು ಮೃತಪಟ್ಟಿದೆ. ನೀರು ಸೇವಿಸಿದ ಹಲವರು ಅಸ್ವಸ್ಥರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ಹಿನ್ನೆಲೆ ಗ್ರಾಮದ ಜನರು ಸ್ಥಳೀಯ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕಲುಷಿತ ನೀರು ಸೇವನೆಯಿಂದ ಈ ಘಟನೆ ನಡೆದಿದೆ. ನೀರು ಸರಬರಾಜು ಮಾಡಿದ ಸಿಬ್ಬಂದಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ.