ಬೆಂಗಳೂರು : ಚಿತ್ರದುರ್ಗದ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಅವರು ನಿನ್ನೆ ಸಂಜೆಯಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಇಂದು ಮಧ್ಯಾಹ್ನ 2 ಗಂಟೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಇಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಲಿದ್ದಾರೆ. ಚಿಕಿತ್ಸೆ ಪಡೆದ 6 ವಾರಗಳ ಬಳಿಕ ಅವರು ಮತ್ತೆ ವಿಚಾರಣಾ ಕೋರ್ಟ್ ಗೆ ಸರೆಂಡರ್ ಆಗಬೇಕಿದೆ. ಈ ಹಿನ್ನೆಲೆಯಲ್ಲಿ ಅವರು ಇಂದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದಾರೆ ಎನ್ನಲಾಗಿದೆ.
ಬಳ್ಳಾರಿ ಜೈಲಿನಲ್ಲಿರುವ ಕೊಲೆ ಆರೋಪಿ ದರ್ಶನ್ ಬೆನ್ನುನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನಟ ದರ್ಶನ್ ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.