ಹಾಸನ : ವರ್ಷಕ್ಕೆ ಒಂದು ಬಾರಿ ಮಾತ್ರ ತೆರೆಯುವ ಹಾಸನ ಜಿಲ್ಲೆಯ ಹಾಸನಾಂಬೆ ದೇವಿಯ ದರ್ಶನಕ್ಕೆ ಅಪಾರ ಸಂಖ್ಯೆಯ ಜನರು ಆಗಮಿಸಿ ದೇವಿಯ ದರ್ಶನ ಪಡೆಯುತ್ತಾರೆ. ಇದೇ ವೇಳೆ ದೇವಿಯ ದರ್ಶನ ಪಡೆಯುವ ಕುರಿತಾಗಿ ಕಂದಾಯ ಇಲಾಖೆಯ ಸಿಬ್ಬಂದಿಗಳ ನಡುವೆ ಗಲಾಟೆ ನಡೆದಿದ್ದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಹೌದು ಹಾಸನದ ಹಾಸನಾಂಬ ದೇಗುಲದಲ್ಲಿ ಹೊಡೆದಾಟ ನಡೆದಿದ್ದು, ಕಂದಾಯ ಇಲಾಖೆಯ ಸಿಬ್ಬಂದಿ ನಡುವೆ ಮಾರಾಮಾರಿ ನಡೆದಿದ್ದು ದೇವಾಲಯದ ಎಕ್ಸಿಟ್ ಗೇಟ್ ಬಳಿ ಹೊಡೆದಾಡಿಕೊಂಡಿದ್ದಾರೆ. ದೇವಾಲಯಕ್ಕೆ ಕರೆದುಕೊಂಡು ಹೋಗುವ ವಿಚಾರಕ್ಕೆ ಈ ಒಂದು ಗಲಾಟೆ ನಡೆದಿದೆ ಎನ್ನಲಾಗಿದೆ.
ಕಂದಾಯ ಇಲಾಖೆ ಸಿಬ್ಬಂದಿಗಳು ಕುಟುಂಬದವರನ್ನು ಹಾಸನಾಂಬೆ ದರ್ಶನಕ್ಕೆ ಕರೆತಂದಿದ್ದರು ಅವರನ್ನು ಮತ್ತೊಬ್ಬ ಸಿಬ್ಬಂದಿ ತಡೆದು ನಿಲ್ಲಿಸಿದ್ದಾನೆ ಇವಳೆ ಮಾತಿಗೆ ಮಾತು ಬೆಳೆದು ಪರಸ್ಪರ ಬಡಿದಾಟ ನಡೆದಿದೆ ಪರಸ್ಪರ ಬಡಿದಾಡಿಕೊಂಡ ಕಂದಾಯ ಇಲಾಖೆ ಸಿಬ್ಬಂದಿಗಳು ಈ ವೇಳೆ ಪೊಲೀಸರು ಹರಸಾಹಸ ಪಟ್ಟು ಜಗಳ ಬಿಡಿಸಲು ಮುಂದಾಗಿದ್ದಾರೆ.