ಬೆಂಗಳೂರು : ಚಿತ್ರದುರ್ಗದ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಅವರು ನಿನ್ನೆ ಸಂಜೆಯಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಇದೀಗ ಪೊಲೀಸರು ನಟ ದರ್ಶನ್ ಬಿಗ್ ಶಾಕ್ ನೀಡಲು ಮುಂದಾಗಿದ್ದು, ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಲು ಪೊಲೀಸರು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ನಟ ದರ್ಶನ್’ಗೆ ಬಿಗ್ ಶಾಕ್ ಎದುರಾಗಿದ್ದು, ಮಧ್ಯಂತರ ಜಾಮೀನು ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಲು ಸಿದ್ದತೆ ನಡೆಸಿದ್ದಾರೆ. ಮಧ್ಯಂತರ ಜಾಮೀನಿನ ಮೂಲಕ ಹೊರಬಂದ ನಟ ದರ್ಶನ್ ಗೆ ಶಾಕ್ ಎದುರಾಗಿದ್ದು, ಸುಪ್ರೀಂಕೋರ್ಟ್ ಮೊರೆ ಹೋಗಲು ಪೊಲೀಸರು ಒಂದು ಸಭೆ ನಡೆಸಿದ್ದಾರೆ. ಇದೀಗ ಸೋಮವಾರ ಮತ್ತೊಂದು ಸಭೆ ನಡೆಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಬಳ್ಳಾರಿ ಜೈಲಿನಲ್ಲಿರುವ ಕೊಲೆ ಆರೋಪಿ ದರ್ಶನ್ ಬೆನ್ನುನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನಟ ದರ್ಶನ್ ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಇಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಲಿದ್ದಾರೆ. ಚಿಕಿತ್ಸೆ ಪಡೆದ 6 ವಾರಗಳ ಬಳಿಕ ಅವರು ಮತ್ತೆ ವಿಚಾರಣಾ ಕೋರ್ಟ್ ಗೆ ಸರೆಂಡರ್ ಆಗಬೇಕಿದೆ. ಈ ಹಿನ್ನೆಲೆಯಲ್ಲಿ ಅವರು ಇಂದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದಾರೆ ಎನ್ನಲಾಗಿದೆ.