ಹಾಸನ: ಜಿಲ್ಲೆಯ ಶಕ್ತಿ ದೇವತೆ ಹಾಸನಾಂಬ ತಾಯಿಯ ದರ್ಶನಕ್ಕೆ ಜನರು ಸಾಲುಗಟ್ಟಿ ನಿಂತಿದ್ದಾರೆ. ಭಕ್ತರ ಸಂಖ್ಯೆ ಹೆಚ್ಚಾಗಿ ಜನಜಂಗುಳಿ ಏರ್ಪಟ್ಟ ಹಿನ್ನೆಲೆಯಲ್ಲಿ ಹಾಸನಾಂಬ ಆಡಳಿತ ಮಂಡಳಿಯಿಂದ ಎಲ್ಲಾ ಪಾಸ್ ರದ್ದುಮಾಡಿ ಆದೇಶಿಸಿದೆ.
ಸದ್ಯ ಸರದಿ ಸಾಲಿನಲ್ಲಿ ನಿಂತಿರುವ ಭಕ್ತರ ಪಾಸ್ ಹೊರತಾಗಿ ಬೇರೆ ಎಲ್ಲಾ ಪಾಸ್ ರದ್ದು ಮಾಡಿರುವುದಾಗಿ ತಿಳಿಸಿದೆ.
ಇನ್ನೂ ಹಾಸನಾಂಬೆ ದರ್ಶನಕ್ಕೆ ಈಗ ಮಳೆ ಅಡ್ಡಿಯಾಗಿದೆ. ಭಾರೀ ಮಳೆಯ ಕಾರಣದಿಂದ ಮಕ್ಕಳು, ಜನರು ಪರದಾಡುವಂತೆ ಆಗಿದೆ. ಅಲ್ಲದೇ ಭಕ್ತರನ್ನು ನಿಯಂತ್ರಣ ಮಾಡಲು ಪೊಲೀಸರು ಹರಸಾಹಸ ಪಡುವಂತೆ ಆಗಿದೆ.