ಬರಸತ್: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯಲ್ಲಿ ಗುರುವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಚ್ಚಾ ತೈಲವನ್ನು ಶುದ್ಧೀಕರಿಸುವ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿದೆ.
ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಬರಾಸತ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಬುಧವಾರ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ