ಬೆಂಗಳೂರು: 69ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿವಿಧ ಕನ್ನಡ ನಾಡಿನ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.
ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ
ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನಾಡಭಾಷೆ ಕನ್ನಡ ಆಡು ಭಾಷೆ, ಅನ್ನದ ಭಾಷೆಯಾಗಲಿ. ನಿತ್ಯ ಬದುಕಿನಲ್ಲಿ ಹೆಚ್ಚೆಚ್ಚು ಕನ್ನಡ ಭಾಷೆಯನ್ನು ಬಳಸೋಣ, ಆ ಮೂಲಕ ಕನ್ನಡವನ್ನು ಬೆಳೆಸೋಣ. “ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ” ಎಂದು ಸಿಎಂ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ.