ಬೆಂಗಳೂರು: ದೀಪಾವಳಿಯ ನಂತರದ ಅವಧಿಯಲ್ಲಿ ಮತ್ತು ಮುಂಬರುವ ದೀರ್ಘ ವಾರಾಂತ್ಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು, ನೈಋತ್ಯ ರೈಲ್ವೆಯು ಹುಬ್ಬಳ್ಳಿ ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲಿದೆ.
ರೈಲು ಸಂಖ್ಯೆ 07353/07354 ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ-ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್ ಪ್ರೆಸ್ (1 ಟ್ರಿಪ್)
ರೈಲು ಸಂಖ್ಯೆ 07353 ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ನವೆಂಬರ್ 3 ರಂದು ಎಸ್ಎಸ್ಎಸ್ ಹುಬ್ಬಳ್ಳಿಯಿಂದ ರಾತ್ರಿ 8 ಗಂಟೆಗೆ ಹೊರಟು, ನವೆಂಬರ್ 4 ರಂದು ಯಶವಂತಪುರ ನಿಲ್ದಾಣವನ್ನು ಮುಂಜಾನೆ 3:30 ಗಂಟೆಗೆ ತಲುಪಲಿದೆ.
ಪುನಃ ಇದೆ ರೈಲು (07354) ನವೆಂಬರ್ 4ರಂದು ಯಶವಂತಪುರದಿಂದ ಬೆಳಗ್ಗೆ 4.45 ಗಂಟೆಗೆ ಹೊರಟು ಅದೇ ದಿನ ಮಧ್ಯಾಹ್ನ 12.50ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿ ತಲುಪಲಿದೆ.
ಈ ರೈಲು ಎರಡೂ ಮಾರ್ಗಗಳಲ್ಲಿ ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ಕಡೂರು, ಅರಸೀಕೆರೆ, ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ಈ ರೈಲಿನಲ್ಲಿ ಒಂದು ಎಸಿ ಫಸ್ಟ್ ಕ್ಲಾಸ್, ಒಂದು ಎಸಿ ಟು ಟೈರ್, ಮೂರು ಎಸಿ ತ್ರಿ-ಟೈರ್, ಎಂಟು ಸ್ಲೀಪರ್ ಕ್ಲಾಸ್, ಐದು ಜನರಲ್ ಸೀಟಿಂಗ್ ಕೋಚ್, ಪ್ಯಾಂಟ್ರಿ ಕಾರ್ (ಲಾಕ್ಡ್ ಕಂಡಿಶನ್) ಮತ್ತು ಎರಡು ಎಸ್‌ಎಲ್‌ಆರ್/ಡಿ ಸೇರಿದಂತೆ 21 ಬೋಗಿಗಳು ಇರಲಿದೆ.
ಪ್ರತಿ ನಿಲ್ದಾಣದಲ್ಲಿನ ಆಗಮನ/ನಿರ್ಗಮನ ಸಮಯಕ್ಕಾಗಿ, ಪ್ರಯಾಣಿಕರು www.enquiry.indianrail.gov.in ಅಧಿಕೃತ ರೈಲ್ವೆ ವೆಬ್‌ಸೈಟ್ ಭೇಟಿ ನೀಡುವ ಮೂಲಕ, NTES ಅಪ್ಲಿಕೇಶನ್ ಬಳಸಿ ಅಥವಾ 139 ನಂಬರಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.
ಕನ್ನಡ ಭಾಷೆ ಬೆಳೆಸುವ ಕಾರ್ಯದಲ್ಲಿ ಎಲ್ಲರೂ ಒಗ್ಗೂಡಬೇಕಿದೆ : ಸಚಿವ ಕೃಷ್ಣಬೈರೇಗೌಡ