ರಾಮನಗರ: ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಮಾತನಾಡಿದರು. ಆ ಭಾಷಣದ ಹೈಲೈಟ್ಸ್ ಮುಂದೆ ಓದಿ.
ಇಂದು ಅಖಂಡ ಕರ್ನಾಟಕ ಅಸ್ತಿತ್ವಕ್ಕೆ ಬಂದ ದಿನ. 1956ಕ್ಕೂ ಮೊದಲು ಕರ್ನಾಟಕ ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿ ಹೋಗಿತ್ತು. ದಕ್ಷಿಣದ ಕೆಲವು ಜಿಲ್ಲೆಗಳು ಮೈಸೂರು ಸಂಸ್ಥಾನದಲ್ಲಿದ್ದರೆ, ಕಲಬುರಗಿ, ಬೀದರ, ರಾಯಚೂರು ಜಿಲ್ಲೆಗಳು ಹೈದ್ರಾಬಾದ್ ನಿಜಾಮರ ಆಳ್ವಿಕೆಗೆ ಒಳಪಟ್ಟಿದ್ದವು. ರಾಜ್ಯದ ವಾಯುವ್ಯ ಭಾಗ ಮುಂಬೈ ಪ್ರಾಂತ್ಯಕ್ಕೆ ಸೇರಿದ್ದರೆ, ದಕ್ಷಿಣ ಕನ್ನಡ, ಕೊಳ್ಳೇಗಾಲ, ಬಳ್ಳಾರಿ ಮುಂತಾದ ಪ್ರದೇಶಗಳು ಮದ್ರಾಸ್ ಪ್ರಾಂತ್ಯಕ್ಕೆ ಸೇರಿದ್ದವು. ಕೊಡಗು ಜಿಲ್ಲೆ ಬ್ರಿಟಿಷರ ಒಂದು ಅಧೀನ ರಾಜ್ಯವಾಗಿ ಉಳಿದಿತ್ತು ಎಂದರು.
ಮೈಸೂರು ರಾಜ್ಯವನ್ನು ನವೆಂಬರ್ 1 1973 ರಂದು ಅಂದಿನ ಮುಖ್ಯಮಂತ್ರಿಗಳಾದ ದಿವಂಗತ ಡಿ.ದೇವರಾಜ ಅರಸರವರು ವಿಶಾಲಾರ್ಥದಲ್ಲಿ ‘ಕರ್ನಾಟಕ’ ಎಂದು ಮರು ನಾಮಕರಣ ಮಾಡಿ ಇಂದಿಗೆ 51 ವರ್ಷ ಪೂರ್ಣಗೊಂಡಿರುತ್ತದೆ ಎಂದು ಹೇಳಿದರು.
ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ ಸ್ಮರಣೀಯರ ಸಂಖ್ಯೆ ಬಹುದೊಡ್ಡದು. ಡೆಪ್ಯೂಟಿ ಚನ್ನಬಸಪ್ಪ, ಹುಯಿಲಗೋಳ ನಾರಾಯಣ ರಾವ್, ಅನಕೃ, ಪಾಟೀಲ ಪುಟ್ಟಪ್ಪ ಸೇರಿದಂತೆ ಹಲವು ಮಹನೀಯರು ಹಾಗೂ ಅಸಂಖ್ಯಾತ ಸಾಹಿತಿಗಳನ್ನು, ಲೇಖಕರನ್ನು, ಸಂಘ ಸಂಸ್ಥೆಗಳನ್ನು ಹಾಗೂ ಹೋರಾಟಗಾರರನ್ನು ನೆನೆಯಬೇಕು ಎಂದರು.
ರಾಮನಗರ ಎಂದೊಡನೆ ನಮಗೆ ನೆನಪಾಗುವುದು ರೇಷ್ಮೆ, ವಿಶ್ವಮಟ್ಟದ ಕೈಗಾರಿಕೆಗಳು, ರಾಜ್ಯದ ಗಮನ ಸೆಳೆಯುತ್ತಿದೆ. ರಾಮನಗರ ಜಿಲ್ಲೆ ಗೊಂಬೆಗಳ ನಾಡು, ಜಾನಪದ ಕಲೆಗಳ ತವರು. ಗ್ರಾಮೀಣ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಜಾನಪದ ವಸ್ತು ಸಂಗ್ರಹಾಲಯ ಜಾನಪದ ಲೋಕ ಎಂದು ತಿಳಿಸಿದರು.
ಎಚ್.ಎಲ್.ನಾಗೇಗೌಡರ ಕನಸಿನ ಕೂಸಾದ ಜಾನಪದ ಲೋಕಕ್ಕೆ ಜಾಗತಿಕ ಮನ್ನಣೆ ದೊರೆತಿದ್ದು, ಯುನೆಸ್ಕೋದ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಯಲ್ಲಿ ಈ ವರ್ಷ ಜಾನಪದ ಲೋಕ ಸ್ಥಾನ ಪಡೆಯುವ ಮೂಲಕ ರಾಮನಗರ ಜಿಲ್ಲೆಗೆ ಹೆಮ್ಮೆ ತಂದಿದೆ ಎಂದರು.
ಅನೇಕ ನಾಯಕರು, ಜಿಲ್ಲಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಚಿವ ಜಮೀರ್ ಆಹಮ್ಮದ್ ಖಾನ್ ಸಚಿವ ಸಂಪುಟದಿಂದ ವಜಾಮಾಡಿ: ಮಾಜಿ ಸಚಿವ ಎಂಪಿ.ರೇಣುಕಾಚಾರ್ಯ ಆಗ್ರಹ
ಕನ್ನಡ ಭಾಷೆ ಬೆಳೆಸುವ ಕಾರ್ಯದಲ್ಲಿ ಎಲ್ಲರೂ ಒಗ್ಗೂಡಬೇಕಿದೆ : ಸಚಿವ ಕೃಷ್ಣಬೈರೇಗೌಡ