ಹಾಸನ : ರೈತರಿಗೆ ವಕ್ಫ್ ಬೋರ್ಡ್ ನಿಂದ ನೋಟಿಸ್ ನೀಡಿದ ವಿಚಾರವಾಗಿ ಸಚಿವ ಜಮೀರ್ ಅಹ್ಮದ್ ಕೋಮುಗಲಭೆ ಹುಟ್ಟು ಹಾಕಲು ಕಾರಣರಾಗುತ್ತಿದ್ದಾರೆ. ಅಧಿಕಾರಿಗಳಿಗೆ ಅವರು ಧಮ್ಕಿ ಹಾಕುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಗೊಂದಲ ನಿರ್ಮಾಣವಾಗಿದೆ. ಹಾಗಾಗಿ ಜಮೀರ್ ಅಹಮದ್ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಹಾಸನದಲ್ಲಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಆಗ್ರಹಿಸಿದರು.
ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪಚುನಾವಣೆಗಾಗಿ ಬಿಜೆಪಿಯವರು ವಿವಾದ ಮಾಡುತ್ತಿದ್ದಾರೆಂದು ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಎಂಎಲ್ಸಿ ಸಿಟಿ ರವಿ ತಿರುಗೇಟು ನೀಡಿದ್ದು, ಆದರೆ ಸಿದ್ದರಾಮಯ್ಯ ಸಂಪುಟದ ಸಚಿವರು ಕೂಡ ಮಾತನಾಡಿದ್ದಾರೆ. ಸಿದ್ದರಾಮಯ್ಯ ಗಮನಕ್ಕೆ ತಂದು ಅವರ ಸೂಚನೆಯ ಮೇರೆಗೆ ನೋಟಿಫಿಕೇಶನ್ ಆಗಿರುವ ಎಲ್ಲವನ್ನು ಖಾತೆ ಮಾಡಿಸಲು ಸೂಚನೆ ನೀಡಿದ್ದಾರೆ ಎಂದರು.
ಇದಕ್ಕೆಲ್ಲ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಸೂಚನೆ ನೀಡಿದ್ದಾರೆ.ಎಲ್ಲಾ ಜಿಲ್ಲೆಗಳಲ್ಲಿ ಅಧಿಕೃತ ಸಭೆ ಮಾಡಿದ್ದಾರೆ. ವಕ್ಫ್ ಸಚಿವ ಜನರಿಗೆ ಬೆನ್ನೆಲುಬಾಗಿ ನಿಂತಿದ್ದು ಸಿಎಂ ಸಿದ್ದರಾಮಯ್ಯ ಎಲ್ಲರಿಗೂ ಸಿಎಂ ಆಗಿರಬೇಕು. ಆದರೆ ಕೆಲವರಿಗೆ ಮಾತ್ರ ಸಿಎಂ ಆಗಬಾರದು ಎಂದು ಪರಿಷತ್ ಸದಸ್ಯ ಸಿಟಿ ರವಿ ಟಾಂಗ್ ನೀಡಿದರು.