ಬೆಂಗಳೂರು : ದೀಪಾವಳಿ ಹಬ್ಬಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ಸಿಗುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ಬಾಕಿ ಇರುವ ತುಟ್ಟಿ ಭತ್ಯೆ ಕುರಿತು ಸೋಮವಾರ ಅಥವಾ ಮಂಗಳವಾರ ಆದೇಶ ಪ್ರಕಟವಾಗಲಿದೆ ಎಂದು ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ಆತ್ಮೀಯ ರಾಜ್ಯದ ಸರ್ಕಾರಿ ನೌಕರ ಬಾಂಧವರೇ, ಕೇಂದ್ರ ಸರ್ಕಾರದ ಆದೇಶದಂತೆ ರಾಜ್ಯದಲ್ಲಿ ಬಾಕಿ ಇರುವ ತುಟ್ಟಿ ಭತ್ಯೆ ಆದೇಶದ ಕಡತ ಸರ್ಕಾರದಲ್ಲಿ ಅನುಮೋದನೆಗೆ ಬಾಕಿ ಇದ್ದು, ಸೋಮವಾರ ಅಥವಾ ಮಂಗಳವಾರ ಸರ್ಕಾರಿ ಆದೇಶವಾಗಲಿದೆ ಎಂದು ಹೇಳಿದ್ದಾರೆ.
ಇನ್ನು ಇತ್ತೀಚೆಗಷ್ಟೇ ಮೋದಿ ಸರ್ಕಾರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಿಹಿಸುದ್ದಿ ನೀಡಿದ್ದು, ಕೇಂದ್ರ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಮತ್ತು ತುಟ್ಟಿಭತ್ಯೆ ಪರಿಹಾರವನ್ನು ಶೇಕಡಾ 46 ರಿಂದ 50 ಕ್ಕೆ ಹೆಚ್ಚಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಟ್ಟಿಭತ್ಯೆ ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅದ್ರಂತೆ, ತುಟ್ಟಿಭತ್ಯೆಯನ್ನ ಜನವರಿ 1 ರಿಂದ ಜೂನ್ 30, 2024 ರವರೆಗೆ ಹೆಚ್ಚಿಸಲಾಗಿದೆ.