ಬೆಂಗಳೂರು : ರಾಜ್ಯದಲ್ಲಿ ವಿವಾದ ಸೃಷ್ಟಿಯಾಗಿದ್ದ ರೈತರಿಗೆ ವಕ್ಫ್ ಬೋರ್ಡ್ ನಿಂದ ನೋಟಿಸ್ ನೀಡಿದ ವಿಚಾರವಾಗಿ ಇದೀಗ ಕಂದಾಯ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ ಹಾಗೂ ವಕ್ಫ್ ಮಂಡಳಿ ಸಭೆಯಲ್ಲಿ ರೈತರಿಗೆ ನೀಡಿದ ನೋಟಿಸ್ ಗಳನ್ನು ಕೂಡಲೇ ವಾಪಸ್ ಪಡೆಯಿರಿ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಹೌದು ವಿಜಯಪುರ ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ ರೈತರ ಪಹಣಿಗಳಲ್ಲಿ ವಕ್ಫ್ ಎಂದು ನಮೂದಾಗಿದ್ದು ರೈತರು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ಅಲ್ಲದೆ ಬಿಜೆಪಿ ಕೂಡ ರಾಜ್ಯವನ್ನು ಪಾಕಿಸ್ತಾನ ಮಾಡಲು ಹೊರಟಿದ್ದೀರಾ ಎಂದು ಕಿಡಿ ಕಾರಿತ್ತು. ಈ ವಿಚಾರವಾಗಿರೈತರಿಗೆ ವಕ್ಫ್ ಬೋರ್ಡ್ ನಿಂದ ನೀಡಿದ ನೋಟಿಸ್ ಹಿನ್ನೆಲೆಯಲ್ಲಿ ನೋಟಿಸ್ ತಕ್ಷಣ ವಾಪಸ್ ಪಡೆಯಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಅಲ್ಲದೆ ಇನ್ನು ಮುಂದೆ ರೈತರಿಗೆ ತೊಂದರೆ ನೀಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ರೈತರ ಪಹಣಿಯಲ್ಲಿ ತಿದ್ದುಪಡಿ ಮಾಡಿ ಎಂದು ವಖ್ಫ್ ಮಂಡಳಿಯ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ಕೂಡಲೇ ರೈತರಿಗೆ ನೀಡಿರುವ ನೋಟಿಸ್ ವಾಪಸ್ ಪಡೆಯಿರಿ ಎಂದು ಖಡಕ್ ಸೂಚನೆ ನೀಡಿದ್ದಾರೆ.