ಬೆಂಗಳೂರು: ನಾನು ಯಾವುದೇ ಮಾಧ್ಯಮದವರಿಗೂ ಶಕ್ತಿ ಯೋಜನೆ ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂಬ ಹೇಳಿಕೆಯನ್ನೇ ನೀಡಿಲ್ಲ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟ ಪಡಿಸಿದ್ದಾರೆ.
ಈ ಬಗ್ಗೆ ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನಾನು ಯಾವುದೇ ಮಾಧ್ಯಮದವರಿಗೂ ಶಕ್ತಿ ಯೋಜನೆ ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂಬ ಹೇಳಿಕೆಯನ್ನೇ ನೀಡಿಲ್ಲ. ಈ ರೀತಿಯ ಹೇಳಿಕೆಗಳು ವಿನಾ ಕಾರಣ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿರುವ ಶಕ್ತಿ ಯೋಜನೆಯ ಬಗ್ಗೆ ಗೊಂದಲ ಸೃಷ್ಟಿಸುವ ಹುನ್ನಾರವಾಗಿದೆ. ನಾನು ಮಾತನಾಡಿಯೇ ಇಲ್ಲದ ಹೇಳಿಕೆಗಳನ್ನು ಈ ರೀತಿ ಪ್ರಕಟಿಸಿರುವುದು ಸರಿಯಲ್ಲ ಎಂದಿದ್ದಾರೆ.
ನನ್ನನ್ನು ಯಾವುದೇ ಮಾಧ್ಯಮದವರು ಈ ಬಗ್ಗೆ ಸಂರ್ಪಕಿಸಿಯೇ ಇಲ್ಲ ನಾನು ಯಾರೊಂದಿಗೂ ಮಾತನಾಡಿಯೇ ಇಲ್ಲದಿರುವುದರಿಂದ ಈ ರೀತಿಯ ಹೇಳಿಕೆಗಳನ್ನು ಮಾಧ್ಯಮದವರು ಪ್ರಕಟಿಸುವ ಮುನ್ನ ನನ್ನನ್ನು ಖುದ್ದು ಸಂರ್ಪಕಿಸಿ ಪ್ರಕಟಿಸಲು ಕೋರಿದ್ದಾರೆ.
✅ಸ್ಪಷ್ಟೀಕರಣ
ನಾನು ಯಾವುದೇ ಮಾಧ್ಯಮದವರಿಗೂ ಶಕ್ತಿ ಯೋಜನೆ ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂಬ ಹೇಳಿಕೆಯನ್ನೇ ನೀಡಿಲ್ಲ.
ಈ ರೀತಿಯ ಹೇಳಿಕೆಗಳು ವಿನಾ ಕಾರಣ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿರುವ ಶಕ್ತಿ ಯೋಜನೆಯ ಬಗ್ಗೆ ಗೊಂದಲ ಸೃಷ್ಟಿಸುವ ಹುನ್ನಾರವಾಗಿದೆ. ನಾನು ಮಾತನಾಡಿಯೇ ಇಲ್ಲದ ಹೇಳಿಕೆಗಳನ್ನು ಈ ರೀತಿ… https://t.co/6HoZDPsnxm
— Ramalinga Reddy (@RLR_BTM) November 2, 2024
ಪೋಷಕರೇ ಗಮನಿಸಿ : ನಿಮ್ಮ ಮಗುವಿನ `ಜನನ ಪ್ರಮಾಣ ಪತ್ರ’ ಪಡೆಯಲು ಈ ದಾಖಲೆಗಳು ಕಡ್ಡಾಯ!