ಬೆಂಗಳೂರು : ವಿಜಯಪುರ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೈತರ ಪಹಣಿಗಳಲ್ಲಿ ವಕ್ಫ್ ಆಸ್ತಿಯೆಂದು ನಮೂದಾಗಿರುವುದನ್ನು ನೋಡಿ ರೈತರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ವಕ್ಫ್ ಮಂಡಳಿ ಸಭೆಯಲ್ಲಿ ಕೂಡಲೇ ರೈತರಿಗೆ ನೀಡಿರುವ ನೋಟಿಸ್ ಪಡೆಯಿರಿ ಎಂದು ಸೂಚನೆ ನೀಡಿದ್ದಾರೆ ಈ ವಿಚಾರವಾಗಿ ಕಾಂಗ್ರೆಸ್ ಶಾಸಕ ಅಜೇಯ್ ಸಿಂಗ್ ಮಾತನಾಡಿದ್ದು, ವಕ್ಫ್ ವಿಚಾರವಾಗಿ ಬಿಜೆಪಿ ಅವಧಿಯಲ್ಲೇ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು.
ವಕ್ಫ್ ವಿಚಾರವಾಗಿ ನೋಟಿಸ್ ಕೊಟ್ಟಿರುವವರು ಯಾರು? ವಕ್ಫ್ ವಿಚಾರವಾಗಿ ಬಿಜೆಪಿ ಅವಧಿಯಲ್ಲೇ ನೋಟಿಸ್ ನೀಡಲಾಗಿದೆ. ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಗೊಂದಲ ಸೃಷ್ಟಿ ಮಾಡುತ್ತಿದೆ. ವಕ್ಫ್ ವಿಚಾರವಾಗಿ ಬಿಜೆಪಿ ಅವರು ಪ್ರತಿಭಟನೆಗೆ ಕರೆ ನೀಡಿದ್ದಾರೆ. ಚುನಾವಣೆ ಮುಗಿಯುವವರೆಗೂ ಮಾತ್ರ ಈ ನಾಟಕ ಆಡುತ್ತಾರೆ.ಬಿಜೆಪಿ ನಾಯಕರ ವಿರುದ್ಧ ಶಾಸಕ ಅಜಯ್ ಸಿಂಗ್ ವಾಗ್ದಾಳಿ ನಡೆಸಿದರು.
ಇನ್ನು ಗ್ಯಾರಂಟಿ ಯೋಜನೆಯ ಕುರಿತು ಮೋದಿ ಟೀಕೆ ಮಾಡಿರುವ ವಿಚಾರವಾಗಿ, ಪ್ರಧಾನಿಗಳು ಕೀಳುಮಟ್ಟದ ರಾಜಕಾರಣ ಮಾಡಬಾರದು. ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಕೊಟ್ಟ ಭರವಸೆಯಂತೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ.54 ಸಾವಿರ ಕೋಟಿ ಹಣ ಗ್ಯಾರೆಂಟಿ ಯೋಜನೆಗೆ ಮೀಸಲಿಟ್ಟಿದ್ದೇವೆ. ಮೋದಿ ಸರ್ಕಾರ ಅಂಬಾನಿ ಆಧಾನಿ ಕಂಪನಿಗಳ ಸಾಲ ಮನ್ನಾ ಮಾಡುತ್ತೆ. ಆದರೆ ರೈತರ ಸಾಲ ಮನ್ನಾ ಮಾಡಲು ಆಗಲ್ಲ. ನಾವು ಎಲ್ಲರಿಗೂ ಸಿಗುವಂತೆ ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಹೇಳಿಕೆ ನೀಡಿದರು
ಮಹಾರಾಷ್ಟ್ರ ಜಾರ್ಖಂಡ್ ಹಲವಡೆ ಉಪಚುನಾವಣೆ ಇದೆ. ಹೀಗಾಗಿ ನಮ್ಮ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ಟೀಕೆ ಮಾಡಿದ್ದಾರೆ.ಶಕ್ತಿ ಯೋಜನೆಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಆದರೆ ಯೋಜನೆ ಬಗ್ಗೆ ಮೋದಿ ಕೀಳು ಮಟ್ಟದ ಆರೋಪ ಮಾಡಿದ್ದಾರೆ. ಹೀಗಾಗಿಯೇ ಪುಢಾರಿ ಎಂಬ ಪದವನ್ನು ಸಿಎಂ ಬಳಿಸಿದ್ದಾರೆ.ಬಿಜೆಪಿಯವರು ಹತಾಶೆಗೊಂಡಿದ್ದಾರೆ. ಚುನಾವಣೆಯಲ್ಲಿ ಸೋಲುತ್ತೇವೆ ಅಂತ ಬಿಜೆಪಿಗೆ ಗೊತ್ತಾಗಿದೆ ಹೀಗಾಗಿ ಬೇರೆ ಬೇರೆ ತಂತ್ರಗಾರಿಕೆ ಮಾಡುತ್ತಿದ್ದಾರೆ.ಏನಾದರೂ ಮಾಡಿ ಅಧಿಕಾರಕ್ಕೆ ಬರಬೇಕೆಂದು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಹೇಳಿಕೆ ನೀಡಿದರು.