ಬೆಳಗಾವಿ : ಗಂಡ ಹಾಗೂ ಅತ್ತೆಯ ಕಾಟಕ್ಕೆ ಬೆಸತ್ತು ಮಹಿಳೆ ತನ್ನ ಗಂಡು ಮಗುವಿನ ಜೊತೆ ಪ್ರಸಿದ್ದ ಹಿಂಡಲಗಾ ಗಣಪತಿ ದೇವಸ್ಥಾನ ಬಳಿಯ ಕೆರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತ ಅಮ್ಮ ಮಗನನ್ನು ಕಲಕಾಂಬ ಗ್ರಾಮದ ಕವಿತಾ ಬಸವಂತ ಜುನೇ (40) ಬೆಳಗಾಂವಕರ ಮತ್ತು ಸಮರ್ಥ ಬಸವಂತ ಜುನೇ ಬೆಳಗಾಂವಕರ (14) ಎಂದು ಗುರುತಿಸಲಾಗಿದೆ.ಪತಿ ಹಾಗೂ ಅತ್ತೆಯ ಕಾಟಕ್ಕೆ ಮನನೊಂದು ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೂ ಮುನ್ನ ಮಹಿಳೆ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದ್ದು, ಪತಿ ಹಾಗೂ ಅತ್ತೆ ಕಾಟದಿದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.